ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ 20ರಂದು ಮೂಡುಬಿದಿರೆಯ ಸ್ಕೌಟ್ಸ್ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ. ಅನನ್ಯ ರಂಗಕರ್ಮಿ, ಪುಸ್ತಕ ಪ್ರೇಮಿ, ಕಿರುತೆರೆ-ಹಿರಿತೆರೆ ಕಲಾವಿದ ಶ್ರೀಪತಿ ಮಂಜನಬೈಲ್ ಅವರು ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಗೊಂಡಿದ್ದು ತಾಲೂಕಿನ ಪ್ರಥಮ ಸಮ್ಮೇಳನದ ಅಧ್ಯಕ್ಷ ಸ್ಥಾನದ ಗೌರವ ಅವರಿಗೆ ಸಲ್ಲುತ್ತಿದೆ. ವಿವಿಧ ಉಪನ್ಯಾಸಗಳು, ಸಾಂಸ್ಕøತಿಕ ಕಾರ್ಯಕ್ರಮಗಳು, ಸಾಧಕರಿಗೆ ಸನ್ಮಾನ ಇತ್ಯಾದಿ ಕಾರ್ಯಕ್ರಮಗಳೊಂದಿಗೆ ಸಮ್ಮೇಳನವು ಅರ್ಥಪೂರ್ಣವಾಗಿ ನಡೆಯಲಿರುವುದೆಂದು ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೇಣುಗೋಪಾಲ ಶೆಟ್ಟಿ ಕೆ, ಅಧ್ಯಕ್ಷರು.