ಸಿ.ಎ ಹಾಗೂ ಸಿ.ಎಸ್ ಫೌಂಡೇಶನ್ ಕೋರ್ಸ್ ಗಳಿಗೆ ಗುಣಮಟ್ಟದ ತರಬೇತಿ ನೀಡುತ್ತಾ ಅಗ್ರಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ. ಇಲ್ಲಿನ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಸಂಸ್ಥೆಗಳು ನವೆಂಬರ್ ಹಾಗೂ ಡಿಸೆಂಬರ್ 2023 ರಲ್ಲಿ ನಡೆಸಿದ ಸಿ.ಎ ಹಾಗೂ ಸಿ.ಎಸ್ ಫೌಂಡೇಶನ್ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದುವುದರ ಮೂಲಕ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಹೃತೀಕ್ ಎಂ.( ಸಿ.ಎ -237), ಆಯುಷ್ (ಸಿ.ಎ-236), ದೀಕ್ಷಾ (ಸಿ.ಎ-223), ಸಮೃದ್ಧಿ (ಸಿ.ಎ-218), ಅಮೋಘ (ಸಿ.ಎ-202), ವೈಷ್ಣವಿ (ಸಿ.ಎಸ್ -137), ಸಹನಾ (ಸಿ.ಎಸ್-118), ಭೂಮಿಕಾ (ಸಿ.ಎಸ್-112), ಅಂಕಗಳೊಂದಿಗೆ ಸಿ.ಎ ಹಾಗೂ ಸಿ.ಎಸ್ ಫೌಂಡೇಶನ್ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದುವುದರ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕಳೆದ ಹಲವು ವರ್ಷಗಳಿಂದ ಸ್ವರ್ಧಾತ್ಮಕ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡುತ್ತಾ ಬಂದಿದ್ದು ಅನೇಕ ವಿದ್ಯಾರ್ಥಿಗಳು ಫೌಂಡೇಶನ್ ಹಂತದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಮುಂದಿನ ಹಂತದ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ದೇಶದ ನಾನಾ ಭಾಗಗಳಲ್ಲಿ ಉದ್ಯೋಗದಲ್ಲಿದ್ದಾರೆ. ಅನುಭವಿ ಲೆಕ್ಕಪರಿಶೋಧಕರು, ತರಬೇತುದಾರರು ಹಾಗೂ ಸಂಸ್ಥೆಯ ಬೋಧಕ ಸಿಬಂದಿಯಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ನೀಡುವುದರ ಪರಿಣಾಮವಾಗಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗಿದೆ. ಬೋಧಕ ಸಿಬಂದಿ ವರ್ಗದವರಿಗೂ ಹಾಗೂ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಎಂ.ಎಂ. ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಎಂ. ಮಹೇಶ್ ಹೆಗ್ಡೆ ಹಾಗೂ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ ಹಾಗೂ ಖಜಾಂಚಿ ಭರತ್ ಶೆಟ್ಟಿ ಅವರು ಅಭಿನಂದಿಸಿದರು.