ಭಾರತೀಯ ಜನತಾ ಪಕ್ಷದ ಉಡುಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ, ಉದ್ಯಮಿ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿ ಜೀವನದಿಂದಲೇ ವಿದ್ಯಾರ್ಥಿ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ಇವರು ಹಲವಾರು ಯಶಸ್ವಿ ವಿದ್ಯಾರ್ಥಿ ಹೋರಾಟಗಳನ್ನು ಸಂಘಟಿಸಿ, ಯಶಸ್ವಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಅನಂತರ ರಾಜಕೀಯ ಪ್ರವೇಶಿಸಿ ಬಿಜೆಪಿ ಪಂಚಾಯತ್ ರಾಜ್ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.


ಗೋವಿಗಾಗಿ ಮೇವು ಎನ್ನುವ ಯಶಸ್ವಿ ಅಭಿಯಾನವನ್ನು ಸಂಘಟಿಸಿ, ಗೋ ಶಾಲೆಗಳಿಗೆ ವಿವಿಧ ಸಂಘಟನೆಗಳಿಂದ ಮೇವು ಒದಗಿಸುವುದರ ಮೂಲಕ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ಕರಾವಳಿ ರೈಲ್ವೇ ಹೋರಾಟ ಸಮಿತಿಯ ಪ್ರಮುಖರಾಗಿ, ಬಿಲ್ಲಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷರಾಗಿ, ಪ್ರಸ್ತುತ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.








































































































