ಸಾಮೆತ್ತಡ್ಕ ಹಿ.ಪ್ರಾ ಶಾಲೆಯಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯರಿಗೆ ತರಬೇತಿ ಕಾರ್ಯಾಗಾರವು ಫೆಬ್ರವರಿ 28 ರಂದು ಸಾಮೆತ್ತಡ್ಕ ಶಾಲೆಯಲ್ಲಿ ನಡೆಯಿತು. ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿ, ಜೆ.ಸಿ.ಐ ಪುತ್ತೂರು, ನಮ್ಮ ಶಾಲೆ ಸ.ಹಿ.ಪ್ರಾ. ಶಾಲೆ ಸಾಮೆತ್ತಡ್ಕ ಇದರ ಸಹಭಾಗಿತ್ವದಲ್ಲಿ ಕಾರ್ಯಾಗಾರ ನಡೆಯಿತು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಪ್ರಸಾದ್ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜೆಸಿಐ ಅಧ್ಯಕ್ಷ ಮೋಹನ್ ಕೆ. ಶುಭ ಹಾರೈಸಿದರು. ಜೆಸಿಐ ತರಬೇತಿ ವಿಭಾಗದ ಉಪಾಧ್ಯಕ್ಷರು ಹಾಗೂ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈಯವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿ ಶಾಲಾಭಿವೃದ್ಧಿ ಸಮಿತಿಯ ಜವಾಬ್ದಾರಿ, ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವ ಬಗ್ಗೆ ಹಾಗೂ ಪೋಷಕರು ಪ್ರಾರ್ಥಮಿಕ ಹಂತದಲ್ಲಿ ತಮ್ಮ ಮಕ್ಕಳ ಬಗ್ಗೆ ಗಮನ ವಹಿಸಬೇಕು ಎಂಬುದರ ಬಗ್ಗೆ ತಿಳಿಸಿದರು. ಪೋಷಕರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು. ದಿನೇಶ್ ಕಾಮತ್ ಸಂದರ್ಭೋಚಿತವಾಗಿ ಮಾತನಾಡಿದರು.
ವೇದಿಕೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಪವಿತ್ರ, ನಮ್ಮ ಶಾಲೆ ಸಾಮೆತ್ತಡ್ಕ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಇಂದಿವರ್ ಭಟ್, ಅಂಗನವಾಡಿ ಶಿಕ್ಷಕಿ ಹೇಮಾವತಿ ಉಪಸ್ಥಿತರಿದ್ದರು. ಶಾಲೆಯ ಹಿರಿಯ ವಿದ್ಯಾರ್ಥಿ ಮೊಹಮ್ಮದ್ ಫಾಹಿಜ್, ಶಾಲಾ ಅಭಿವೃದ್ಧಿ ಸಮಿತಿಯ ಎಲ್ಲಾ ಸದಸ್ಯರು, ಮಕ್ಕಳ ಪೋಷಕರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮುಖ್ಯ ಶಿಕ್ಷಕಿ ಮರಿಯಾ ಅಶ್ರಫ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.