ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ ಒಟ್ಟು 16 ಸ್ಥಾನಗಳ ಪೈಕಿ 15 ಸ್ಥಾನಗಳಿಗೆ ತಲಾ ಒಂದು ನಾಮಪತ್ರಗಳು ಸಲ್ಲಿಕೆಯಾಗಿದ್ದು ಪುತ್ತೂರಿನಿಂದ ಶಶಿಕುಮಾರ್ ರೈ ಬಾಲ್ಯೊಟ್ಟು ಸೇರಿದಂತೆ 15 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷರಾಗಿರುವ ಶಶಿಕುಮಾರ್ ರೈ ಅವರು ಸತತವಾಗಿ 3 ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.





































































































