ಪುಣೆಯ ಖ್ಯಾತ ಹೋಟೆಲ್ ಉದ್ಯಮಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರು, ಪುಣೆ ಬಂಟರ ಸಂಘದ ಅತ್ಯಂತ ಯಶಸ್ವಿ ಅಧ್ಯಕ್ಷ, ಬಂಟ ಸಮಾಜದ ಮುಖಂಡರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಇವರ ಮಾಲಕತ್ವದ ಕೊರೊನೆಟ್ ಬ್ಯೂಟಿಕ್ ಹೋಟೆಲ್ ನೂತನ ವಿನ್ಯಾಸದೊಂದಿಗೆ ಪುಣೆಯ ಆಪ್ಟೆ ರೋಡ್ ನಲ್ಲಿ ಮಾರ್ಚ್ 1ರಂದು ಎಂ ಆರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೆ ಪ್ರಕಾಶ್ ಶೆಟ್ಟಿಯವರ ಉದ್ಘಾಟನೆಯೊಂದಿಗೆ ಶುಭಾರಂಭಗೊಂಡಿತು. ವಾಸ್ತು ಪೂಜೆ, ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ದೇವತಾ ಕಾರ್ಯಗಳು ನಡೆದವು. ಈ ಸಂಧರ್ಭ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಎಂ.ಆರ್.ಜಿ ಗ್ರೂಪ್ ನ ಸಿ.ಎಂ.ಡಿ ಕೆ ಪ್ರಕಾಶ್ ಶೆಟ್ಟಿ, ಜಾಗತಿಕ ಬಂಟರ ಸಂಘದ ಪದಾಧಿಕಾರಿಗಳು, ಮುಂಬಯಿ ಬಂಟರ ಸಂಘದ ಪ್ರಮುಖರು, ಖ್ಯಾತ ಉದ್ಯಮಿಗಳು ಆಗಮಿಸಿ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಹಾಗೂ ಶ್ರೀಮತಿ ದಿವ್ಯಾ ಸಂತೋಷ್ ಶೆಟ್ಟಿಯವರನ್ನು ಶಾಲು ಪುಷ್ಪಗುಚ್ಛ ಸ್ಮರಣಿಕೆ ನೀಡಿ ಅಭಿನಂದಿಸಿ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಫೆಡರೇಶನ್ ಆಫ್ ವರ್ಲ್ಡ್ ಬಂಟ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ವಿ ಕೆ ಗ್ರೂಪ್ ಆಫ್ ಕಂಪನಿಸ್ ಸಿ.ಎಂ.ಡಿ ಕೆ ಎಂ ಶೆಟ್ಟಿ, ಸಿ.ಎ ಎನ್ ಬಿ ಶೆಟ್ಟಿ, ಹೋಟೆಲ್ ಸಾಯಿ ಪ್ಯಾಲೇಸ್ ನ ಆಡಳಿತ ನಿರ್ದೇಶಕ ರವಿ ಶೆಟ್ಟಿ, ಮುಂಬಯಿ ಬಂಟರ ಸಂಘದ ಮಾಜಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಗೌ ಕಾರ್ಯದರ್ಶಿ ಡಾ. ಅರ್.ಕೆ ಶೆಟ್ಟಿ, ಎಸ್.ಎಂ ಶೆಟ್ಟಿ ಶಿಕ್ಷಣ ಸಮೂಹ ಸಂಸ್ಥೆ ಮುಂಬಯಿಯ ಕಾರ್ಯಾಧ್ಯಕ್ಷ ರತ್ನಾಕರ್ ಶೆಟ್ಟಿ ಮುಂಡ್ಕೂರು, ಬೆಂಗಳೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಉಪ್ಪೇಂದ್ರ ಶೆಟ್ಟಿ, ಮುಂಬಯಿ ಶ್ರೀ ಸಿದ್ದಿವಿನಾಯಕ ಮಂದಿರ ಟ್ರಸ್ಟಿ ಭಾಸ್ಕರ್ ಶೆಟ್ಟಿ, ನವಿ ಮುಂಬಯಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಸಂಜೀವ ಎಸ್. ಶೆಟ್ಟಿ, ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಾಜಿ ಅಧ್ಯಕ್ಷ ನ್ಯಾಯವಾದಿ ಪ್ರಕಾಶ್ ಎಲ್ ಶೆಟ್ಟಿ, ಬೊಂಬೆ ಬಂಟ್ಸ್ ಅಸೋಸಿಯೇಷನ್ ಮಾಜಿ ಅಧ್ಯಕ್ಷ ಶ್ಯಾಮ್ ಎನ್.ಶೆಟ್ಟಿ, ಬಾಬಾ ಗ್ರೂಪ್ ನ ವಿಜಯ ಶೆಟ್ಟಿ, ತುಂಗಾ ಹಾಸ್ಪಿಟಲ್ ಮುಂಬಯಿ ನಿರ್ದೇಶಕ ಉಮೇಶ್ ಶೆಟ್ಟಿ, ಬಂಟರ ಸಂಘ ಮುಂಬಯಿಯ ಪಶ್ಚಿಮ ವಲಯ ಸಮನ್ವಯಕರಾದ ಖಾಂದೇಶ್ ಭಾಸ್ಕರ್ ಶೆಟ್ಟಿ, ಮುಂಬಯಿ ಉದ್ಯಮಿಗಳಾದ ಹರೀಶ್ ಶೆಟ್ಟಿ ಗುರ್ಮೆ, ಅಶೋಕ್ ಶೆಟ್ಟಿ, ಪ್ರಭಾಕರ್ ಶೆಟ್ಟಿ ಇನ್ನ, ದಿವಾಕರ್ ಶೆಟ್ಟಿ ಕುರ್ಲಾ, ಸಮಾಜ ಸೇವಕ ಸಂಚಿತ್ ಶೆಟ್ಟಿ ಹಾಗೂ ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷರುಗಳು, ಟ್ರಸ್ಟಿಗಳು ಕಾರ್ಯಕಾರಿ, ಸಮಿತಿಯ ಪದಾಧಿಕಾರಿಗಳು, ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು, ಆಪ್ತ ಮಿತ್ರರು, ಹಿತೈಶಿಗಳು ಉಪಸ್ಥಿತರಿದ್ದರು. ಸಂತೋಷ್ ಶೆಟ್ಟಿಯವರು ಐಕಳ ಹರೀಶ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಮತ್ತು ಆಗಮಿಸಿದ ಗಣ್ಯರನ್ನು ಶಾಲು ಪುಷ್ಪಗುಚ್ಛ ನೀಡಿ ಗೌರವಿಸಿದರು.
ಮುಂಬಯಿ ಬಂಟರ ಸಂಘದ ಬಂಟರವಾಣಿ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರ್ ಮೋಹನ್ ರೈ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ವರದಿ, ಚಿತ್ರ : ಹರೀಶ್ ಮೂಡಬಿದ್ರಿ ಪುಣೆ