ಭಾರತ ಸರಕಾರ ಸ್ವಾಮ್ಯದ ಇಂಡಿಯನ್ ರೋಡ್ ಕಾಂಗ್ರೆಸ್ ಇದರ ತಾಂತ್ರಿಕ ಸಮಿತಿಗೆ ಸದಸ್ಯರಾಗಿ ಹೈವೇ ಇಂಜಿನೀಯರ್, ಪುತ್ತೂರು ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಡಾ ಹರ್ಷಕುಮಾರ್ ರೈ ಮಾಡಾವು ನೇಮಕಗೊಂಡಿರುತ್ತಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಆರ್ಕಿಟೆಕ್ಟ್ ಮತ್ತು ಕನ್ಸಲ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಬ್ರೈಟ್ ಇಂಡಿಯಾ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದಾರೆ.
ಇಂಡಿಯನ್ ರೋಡ್ ಕಾಂಗ್ರೆಸ್ 1934 ಇಸವಿಯಲ್ಲಿ ಸ್ಥಾಪನೆಗೊಂಡಿದ್ದು ನವದೆಹಲಿಯಲ್ಲಿ ಕೇಂದ್ರ ಕಛೇರಿಯನ್ನು ಹೊಂದಿದೆ. ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟ ಹೊಸ ಹೊಸ ವಿನ್ಯಾಸ ಮತ್ತು ತಂತ್ರಜ್ಞಾನ ಅನುಷ್ಠಾನಗೊಳಿಸುವುದು ಹಾಗೂ ರಸ್ತೆಯ ಬಗ್ಗೆ ಸಂಶೋಧನೆ ನಡೆಸಿ, ತಾಂತ್ರಿಕ ಬದಲಾವಣೆ ತರುವಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಸಲಹೆ ಸೂಚನೆ ನೀಡುವ ಜವಾಬ್ದಾರಿ ನಿರ್ವಹಿಸುತ್ತಿದೆ.