ಜಯಪ್ರಕಾಶ್ ಹೆಗ್ಡೆಯವರು ಕುಂದಾಪ್ರ ಕನ್ನಡ ಅಧ್ಯಯನ ಪೀಠಕ್ಕೆ ರಾಜ್ಯ ಸರ್ಕಾರದಿಂದ ಒಂದೂವರೆ ಕೋಟಿ ರೂಪಾಯಿ ಅನುದಾನ ಮಂಜೂರಾಗುವಂತೆ ಪತ್ರ ಬರೆದಿದ್ದು ಸಿದ್ದರಾಮಯ್ಯ ಸರ್ಕಾರ ಒಂದೂವರೆ ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಮಾಡಿದೆ.
ಬೆಂಗಳೂರಿನ ಕುಂದಾಪ್ರ ಕನ್ನಡ ಪ್ರತಿಷ್ಠಾನ ಬೆಂಗಳೂರಿನಲ್ಲಿ ನಡೆದ ವಿಶ್ವಕುಂದಾಪ್ರ ಕನ್ನಡ ದಿನಾಚರಣೆಯ ಸಂದರ್ಭದಲ್ಲಿ ಅಧ್ಯಯನ ಪೀಠ ಸ್ಥಾಪನೆಗೆ ಹಣ ಬಿಡುಗಡೆ ಮಾಡಿಸಿಕೊಡುವಂತೆ ಕೆ.ಜಯಪ್ರಕಾಶ್ ಹೆಗ್ಡೆಯವರಲ್ಲಿ ವಿನಂತಿಸಿಕೊಳ್ಳಲಾಗಿತ್ತು. ಅದನ್ನು ತಮ್ಮ ಪತ್ರದಲ್ಲಿ ಪ್ರಸ್ಥಾಪಿಸಿ ಮುಖ್ಯಮಂತ್ರಿಗಳಿಗೆ ಹೆಗ್ಡೆಯವರು ಪತ್ರವನ್ನು ಬರೆದಿದ್ದು ಸರ್ಕಾರ ಅದಕ್ಕಾಗಿ ಹಣವನ್ನೂ ಮಂಜೂರು ಮಾಡಿದೆ. ಈ ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸ್ಥಾಪನೆಯಾಗಲೂ ಕೂಡ ಜಯಪ್ರಕಾಶ್ ಹೆಗ್ಡೆಯವರೇ ಕಾರಣರಾಗಿದ್ದರು ಎನ್ನುವುದನ್ನು ಇಲ್ಲಿ ಸ್ಮರಿಸಲೇಬೇಕಿದೆ.
-ವಸಂತ್ ಗಿಳಿಯಾರ್