ಉದ್ಯಮಿ ಜಗನ್ನಾಥ ಚೌಟ ಬದಿಗುಡ್ಡೆ ಅವರು ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಮುಂದಿನ 4 ವರ್ಷಗಳವರೆಗೆ ಕರ್ನಾಟಕ ಸರಕಾರದಿಂದ ನೇಮಕಗೊಂಡಿದ್ದಾರೆ.
ಇವರು ಶ್ರೀ ಶರಭೇಶ್ವರ ದೇವಸ್ಥಾನ ಸರಪಾಡಿಯ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದಾರೆ. ಮಾತ್ರವಲ್ಲದೇ ಬಿ.ಸಿ.ರೋಡು ಪೊಲೀಸ್ ಲೈನ್ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ (ರಿ.) ನ ಗೌರವ ಅಧ್ಯಕ್ಷರಾಗಿದ್ದಾರೆ.
ಬಂಟ್ವಾಳ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿರುವ ಜಗನ್ನಾಥ ಚೌಟ ಆಯ್ಕೆಗೆ ಬಂಟರ ಸಂಘ ಮುಂಬಯಿಯ ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷ ಮಾಣಿ ಗುತ್ತು ಶಿವಪ್ರಸಾದ್ ಆರ್ ಶೆಟ್ಟಿ, ಕಲ್ಲಾಜೆ ಗುತ್ತು ಸುಹಾಸ್ ಆರ್ ರೈ, ಬಂಟರ ಸಂಘ ಮುಂಬಯಿಯ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.