ಬಂಟರ ಯಾನೆ ನಾಡವರ ಮಾತೃ ಸಂಘ (ರಿ), ಕುಂದಾಪುರ ತಾಲೂಕು ಸಮಿತಿ ಮತ್ತು ಕುಂದಾಪುರ ತಾಲೂಕು ಮಹಿಳಾ ವಿಭಾಗ ಇದರ ಸಹಭಾಗಿತ್ವದಲ್ಲಿ ಸಾಮೂಹಿಕ ‘ಸತ್ಯನಾರಾಯಣ ಪೂಜೆ’ಯು ಬಂಟರ ಯಾನೆ ನಾಡವರ ಸಂಕೀರ್ಣದಲ್ಲಿರುವ ಎಸ್. ಎಸ್. ಹೆಗ್ಡೆ ಸಭಾಭವನದಲ್ಲಿ ನಡೆಯಿತು. ಸಾಮೂಹಿಕ ‘ಸತ್ಯನಾರಾಯಣ ಪೂಜೆ’ ಯನ್ನು ನಿವೃತ್ತ ವಿಜಯ ಬ್ಯಾಂಕ್ ಮ್ಯಾನೇಜರ್ ಮತ್ತು ರೆಡ್ ಕ್ರಾಸ್ ಕುಂದಾಪುರ ಇದರ ಕಾರ್ಯದರ್ಶಿ ಶಿವರಾಮ ಶೆಟ್ಟಿ ಮತ್ತು ಶ್ರೀಮತಿ ಆಶಾ ಎಸ್. ಶೆಟ್ಟಿ ಕುಂದಾಪುರ ದಂಪತಿಯವರಿಂದ ನೆರವೇರಿಸಲಾಯಿತು. ಸೇವಾಕರ್ತರನ್ನು ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ದ.ಕ. ಮಂಗಳೂರು ಇದರ ಜೊತೆ ಕಾರ್ಯದರ್ಶಿಗಳಾದ ಸಂಪಿಗೇಡಿ ಸಂಜೀವ ಶೆಟ್ಟಿ ಸನ್ಮಾನಿಸಿದರು.
ತಾಲೂಕು ಸಮಿತಿಯ ಸಂಚಾಲಕರಾದ ಆವರ್ಸೆ ಸುಧಾಕರ ಶೆಟ್ಟಿ ಸ್ವಾಗತಿಸಿದರು. ಕುಂದಾಪುರ ತಾಲೂಕು ಸಂಘ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ಹೆಗ್ಡೆ ಮತ್ತು ತಾಲೂಕು ಸಮಿತಿ ಸದಸ್ಯರಾದ ಕಾವ್ರಾಡಿ ಸಂಪತ್ ಕುಮಾರ್ ಶೆಟ್ಟಿ, ಸೀತಾರಾಮ ಶೆಟ್ಟಿ ಕೆದೂರು, ಕಿರಣ ಹೆಗ್ಡೆ ಅಂಪಾರು, ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಕೊರಗಯ್ಯ ಶೆಟ್ಟಿ ಮತ್ತು ಶ್ರೀಮತಿ ಗಿರಿಜಾ ಕೆ ಶೆಟ್ಟಿ, ಶ್ರೀಮತಿ ಸುಪ್ರೀತಾ ದೀಪಕ್ ಕುಮಾರ್ ಶೆಟ್ಟಿ, ನಾಮ ನಿರ್ದೇಶನ ಸದಸ್ಯರಾದ ಭುದ್ಧರಾಜ್ ಶೆಟ್ಟಿ ಮಾರ್ಕೋಡು, ಸುನಿಲ್ ಶೆಟ್ಟಿ ಹೇರಿಕುದ್ರು, ಕುಂದಾಪುರ ತಾಲೂಕು ಸಂಘದ ಮಾಜಿ ಅಧ್ಯಕ್ಷರಾದ ಬಿ.ಅರುಣ್ ಕುಮಾರ್ ಶೆಟ್ಟಿ, ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು. ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾದ ಅಶೋಕ ಶೆಟ್ಟಿ ಸಂಸಾಡಿಯವರು ವಂದಿಸಿದರು.