ಮಾ. 28 ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ಯು.ಕೆ.ಜಿ ವಿದ್ಯಾರ್ಥಿಗಳಿಗೆ ಘಟಿಕೋತ್ಸವ
ಸಮಾರಂಭವನ್ನು ಆಯೋಜಿಸಲಾಗಿತ್ತು. ಮಣಿಪಾಲ ಎಜುಕೇರ್ ಅಕಾಡೆಮಿಯ ಪ್ರಾಂಶುಪಾಲೆ ಶ್ರೀಮತಿ ಗ್ಲಾಡಿಯಸ್
ಶಿರಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಬೇಕಾದರೆ ಬಾಲ್ಯದ ದಿನಗಳಲ್ಲಿ ಕಲಿತಿರುವ ಉತ್ತಮ ಸಂಸ್ಕಾರ, ಮೌಲ್ಯಗಳು ಮುಖ್ಯವಾಗುತ್ತದೆ. ಹಾಗಾಗಿ ಉತ್ತಮ ಮೌಲ್ಯಗಳನ್ನು ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಪೋಷಕರು ಪ್ರೇರೇಪಿಸಬೇಕೆಂದರು.
ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ಆತ್ಮವಿಶ್ವಾಸವನ್ನು ಹೆಚ್ಚಿಸುವಂತಹ ಚಟುವಟಿಕೆಗಳಲ್ಲಿ
ಮಕ್ಕಳು ತೊಡಗಿಸಿಕೊಳ್ಳುವಂತೆ ಪೆÇೀಷಕರು ಪ್ರೋತ್ಸಾಹಿಸುವುದರ ಜೊತೆಗೆ ಹೆಚ್ಚಿನ ಸಮಯವನ್ನು ಮಕ್ಕಳಿಗಾಗಿ ಮೀಸಲಿಡಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಾಲೆ, ಶಿಕ್ಷಕರ ಜೊತೆ ಪೋಷಕರ ಪಾತ್ರ ಬಹುಮುಖ್ಯವಾದದ್ದು ಎಂದರು. ಕಾರ್ಯಕ್ರಮದಲ್ಲಿ ಪೋಷಕರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.