ಧಾರ್ಮಿಕ ಕ್ಷೇತ್ರಗಳು, ಸಂಘ ಸಂಸ್ಥೆಗಳು ಪ್ರಸ್ತುತ ಸೇವಾ ಚಟುವಟಿಕೆಗಳಲ್ಲಿ ತೊಡಗಿಸುವ ಅಗತ್ಯವಿದೆ ಎಂದು ಮುಂಬಯಿ ಉದ್ಯಮಿ ಅನಿಲ್ ಶೆಟ್ಟಿ ತೇವು ಸೂರಿಂಜೆ ನುಡಿದರು. ಅವರು ಕೋರ್ದಬ್ಬು ದೈವಸ್ಥಾನ ಬೊಳೈರು ಸೂರಿಂಜೆ ಇಲ್ಲಿನ ವಾರ್ಷಿಕ ನೇಮೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೋರ್ದಬ್ಬು ದೈವಸ್ಥಾನ ಸೇವಾ ಸಮಿತಿಯು ಪ್ರತಿ ವರ್ಷ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ. ಮುಂದೆಯೂ ಇಂತಹ ಉತ್ತಮ ಕಾರ್ಯ ಮುಂದುವರಿಯಲಿ ಎಂದರು.
ವೇದಿಕೆಯಲ್ಲಿ ಗುತ್ತಿಗೆದಾರ ನಾಗರಾಜ್ ಪೂಜಾರಿ ಕಡಂಬೋಡಿ, ಸೂರಿಂಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜೀತೆಂದ್ರ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಳೈರು ಸೂರಿಂಜೆಯ ಮುಖ್ಯ ಶಿಕ್ಷಕಿ ಸೇಸಮ್ಮ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿ ಮನೋಹರ ಶೆಟ್ಟಿ ಸೂರಿಂಜೆ ವಹಿಸಿದರು. ಇದೇ ಸಂದರ್ಭದಲ್ಲಿ ಕ್ರೀಡೆಯಲ್ಲಿ ಮತ್ತು ಕಲಿಯುವಿಕೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.