ಮೂಡುಬಿದಿರೆ: ಇತ್ತೀಚಿಗೆ ಆಫ್ರಿಕಾದ ಟ್ಯೂನಿಷಿಯ ದೇಶದಲ್ಲಿ ಜರುಗಿದ ಅಂತರಾಷ್ಟ್ರೀಯ ಮಟ್ಟದ ಹಾಗೂ ಆಫ್ರಿಕಾದ ಅತೀ ದೊಡ್ಡ ವಿಜ್ಞಾನ ಇಂಜಿನಿಯರಿಂಗ್ ತಂತ್ರಜ್ಞಾನ ಸಮ್ಮೇಳನ ಐ-ಫೆಸ್ಟ್ 2024ರಲ್ಲಿ ಮೂಡಬಿದಿರೆಯ ಆಳ್ವಾಸ್ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿ ಅಮೋಘ ಹೆಬ್ಬಾರ್ ಪ್ರದರ್ಶಶಿಸಿದ ವಿಜ್ಞಾನ ಪ್ರಾಜೆಕ್ಟಿಗೆ ಬೆಳ್ಳಿ ಪದಕ ಲಭಿಸಿದೆ. ಈ ಸಮ್ಮೇಳನದಲ್ಲಿ ವಿಶ್ವದ ಸುಮಾರು 35 ದೇಶಗಳಿಂದ 400ಕ್ಕೂ ಅಧಿಕ ವಿದ್ಯಾರ್ಥಿಗಳು ವಿವಿಧ ವೈಜ್ಞಾನಿಕ ಪ್ರಾಜೆಕ್ಟ್ಗಳನ್ನು ಪ್ರದರ್ಶಿಸಿದ್ದರು.
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ. ಅಜಿತ್ ಹೆಬ್ಬಾರ್ ಮಾರ್ಗದರ್ಶನ ನೀಡಿದ್ದರು. ಈ ಹಿಂದೆ
ಸೈನ್ಸ್ ಸೊಸೈಟಿ ಆಫ್ ಇಂಡಿಯಾ ವತಿಯಿಂದ ನಡೆದ ವಿಜ್ಞಾನ ಮೇಳದಲ್ಲಿ ಗೆಲ್ಲುವುದರ ಮೂಲಕ ಅಮೋಘ ಹೆಬ್ಬಾರ್ ಅಂತರಾಷ್ಟ್ರೀಯ ಮಟ್ಟದ ಈ ಸಮ್ಮೇಳನಕ್ಕೆ ಆಯ್ಕೆಯಾಗಿದ್ದರು. ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ವಿದ್ಯಾರ್ಥಿಯ ಸಾಧನೆಯನ್ನು ಶ್ಲಾಘಿಸಿದ್ದಾರೆ.