31 ವರ್ಷಗಳ ಸುದೀರ್ಘ ಸೇವೆಯನ್ನು ದೇಶಕ್ಕಾಗಿ ಅರ್ಪಿಸಿದ ವೀರ ಯೋಧ, ದೇಶಭಕ್ತ ಶ್ರೀ ಕರ್ನಲ್ ಅಗರಿ ಜಗಜೀವನ್ ಭಂಡಾರಿಯವರಿಗೆ ಮೇ 19 ರಂದು ಮಂಗಳೂರು ಪುರಭವನದಲ್ಲಿ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ವೇದಿಕೆಯಲ್ಲಿ ಬಂಟ್ಸ್ ನೌ ಮಾಧ್ಯಮ ಸಂಸ್ಥೆ ಪ್ರಸ್ತುತ ಪಡಿಸುವ ಅನುಬಂಧ ಕಾರ್ಯಕ್ರಮದಲ್ಲಿ 2024 ರ ಸಾಲಿನ ಬಂಟ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಎನ್ ಹೆಗ್ಡೆ, ಮಣಿಪಾಲ ವಿದ್ಯಾಸಂಸ್ಥೆಯ ಉಪಕುಲಪತಿ ಡಾ. ಎಚ್ ಎಸ್ ಬಲ್ಲಾಳ್, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಡಾ ಎಂ ಜಯಕರ್ ಶೆಟ್ಟಿ, ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಡಾ ಎ ಸದಾನಂದ ಶೆಟ್ಟಿ, ಹಿರಿಯ ಉದ್ಯಮಿ ಚಿಕ್ಕಪ್ಪ ನಾಯ್ಕ್, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಬಿ ಅಪ್ಪಣ್ಣ ಹೆಗ್ಡೆ, ಎ ಜೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಎ ಜೆ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಮುಂಬಯಿ ಉದ್ಯಮಿ ರಮೇಶ್ ಶೆಟ್ಟಿ ಸಿದ್ದಕಟ್ಟೆ, ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಮಾಜಿ ಕಾರ್ಯದರ್ಶಿ ಮಧುಕರ್ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಕೋಶಾಧಿಕಾರಿ ಎಚ್ ಅಮರನಾಥ್ ಶೆಟ್ಟಿ, ಬ್ರಹ್ಮಾವರ ಬಂಟರ ಸಂಘದ ಮಾಜಿ ಅಧ್ಯಕ್ಷ ಎಚ್ ವಿಠಲ ಶೆಟ್ಟಿ ಶೇಡಿಕೋಡ್ಲು ಮುಂತಾದವರು ಆಗಮಿಸಲಿದ್ದಾರೆ.