ಮಲಾಡ್ ಪಶ್ಚಿಮದ ಸಮಾಜ ಸೇವಕ, ಅಯ್ಯಪ್ಪ ಸ್ವಾಮಿಯ ಪರಮ ಭಕ್ತ ದಿವಾಕರ್ ಶೆಟ್ಟಿಗಾರ್ ಗುರುಸ್ವಾಮಿ ಅವರು 49 ವರ್ಷಗಳ ಹಿಂದೆ ಸ್ಥಾಪಿಸಿರುವ ಕನ್ನಡ ನವತಾರಾ ಕಲಾ ಮಂಡಳಿ ಮಲಾಡ್ ಸಂಸ್ಥೆಯನ್ನು ಸ್ಥಾಪಿಸಿ ಧಾರ್ಮಿಕ, ಸಾಮಾಜಿಕ ಸೇವಾ ಕಾರ್ಯಗಳನ್ನು ನಡೆಸುತ್ತಾ ಬಂದಿದ್ದಾರೆ. ಪ್ರತಿ ವರ್ಷದಂತೆ ಮಲಾಡ್ ಪಶ್ಚಿಮದ ಸೋಮವಾರ ಬಜಾರ್ ಶ್ರೀ ಪಾಟ್ಲಾದೇವಿ ಮಂದಿರದ (ರಾಮ ಮಂದಿರ) ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಅನ್ನದಾನ ಹಾಗೂ ರಾತ್ರಿ ಸಭಾ ಕಾರ್ಯಕ್ರಮ, ರಾತ್ರಿ ಯಕ್ಷಗಾನ ಪ್ರದರ್ಶನವನ್ನು ನಡೆಸುತ್ತಾ ಬಂದಿದ್ದಾರೆ. ಈ ವರ್ಷ 49 ನೇ ವಾರ್ಷಿಕ ಮಹಾಪೂಜೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಎಪ್ರಿಲ್ 20 ರಂದು ಶನಿವಾರ ಶ್ರೀ ಪಾಟ್ಲಾದೇವಿ ಮಂದಿರ (ರಾಮ ಮಂದಿರ ), ಸೋಮವಾರ ಬಜಾರ್, ಮಾಲಾಡ್ (ಪ) ಇಲ್ಲಿ ಜರಗಲಿರುವುದು.
ಪೂಜಾ ಕಾರ್ಯಕ್ರಮಗಳು ಮಧ್ಯಾಹ್ನ ಗಂಟೆ 2.00 ರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಗಂಟೆ 3.00 ರಿಂದ ಮಹಾ ಅಭಿಷೇಕ, ಸಾಯಂಕಾಲ ಗಂಟೆ 4.00 ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ, ರಾತ್ರಿ 8 ರಿಂದ ಅನ್ನ ಸಂತರ್ಪಣೆ ಜರಗಲಿರುವುದು. ರಾತ್ರಿ ಗಂಟೆ 9.00 ಕ್ಕೆ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನೆರವೇರಲಿದೆ.
ಗೌರವ ಅತಿಥಿಗಳಾಗಿ ಬಾಂಬೆ ಬಂಟ್ ಅಸೋಸಿಯೇಷನ್ ನ ಅಧ್ಯಕ್ಷ ಸಿಎ ಸುರೇಂದ್ರ ಶೆಟ್ಟಿ, ಮಾನವ ಸೇವಾ ಸಂಘ ಮಹಾರಾಷ್ಟ್ರದ ಅಧ್ಯಕ್ಷ ಡಾ. ಹರೀಶ್ ಶೆಟ್ಟಿ, ಹೋಟೆಲ್ ಉದ್ಯಮಿ ಡಾ. ಸತೀಶ್ ಶೆಟ್ಟಿ,(ಸಿಇಓ), ಒಕ್ಕಲಿಗರ ಸಂಘ ಮಹಾರಾಷ್ಟ್ರದ ಕಾರ್ಯಾಧ್ಯಕ್ಷ ರಂಗಪ್ಪ ಸಿ ಗೌಡ, ಭಂಡಾರಿ ಮಹಾ ಮಂಡಲದ ಮಾಜಿ ಅಧ್ಯಕ್ಷ ಸುರೇಶ್ ಭಂಡಾರಿ ಕಡಂದಲೆ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಶ್ರೀ ಮಹಾಮ್ಮಾಯಿ ದೇವಸ್ಥಾನದ ಧರ್ಮದರ್ಶಿ ರವಿ ಸ್ವಾಮೀಜಿ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷ ಅಡ್ವೊಕೇಟ್ ಜಗನ್ನಾಥ್ ಎನ್ ಶೆಟ್ಟಿ ಪಣಿಯೂರು, ಮಲಾಡ್ ಕನ್ನಡ ಸಂಘದ ಅಧ್ಯಕ್ಷ ಅಡ್ವೊಕೇಟ್ ಜಗದೀಶ ಹೆಗ್ಡೆ, ಭಾರತ್ ಬ್ಯಾಂಕ್ ನ ನಿರ್ದೇಶಕ, ಬಿಲ್ಲವರ ಅಸೋಸಿಯೇಷನ್ ಮಲಾಡ್ ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ಸಂತೋಷ್ ಕೆ ಪೂಜಾರಿ, ಶ್ರೀ ಶಕ್ತಿ ಫೌಂಡೇಶನ್ ಮೀರಾರೋಡ್ ಅಧ್ಯಕ್ಷೆ ಶಾಲಿನಿ ಎಸ್. ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ರಾತ್ರಿ 10 ಗಂಟೆಗೆ ಶ್ರೀ ಗುರುನಾರಾಯಣ ಯಕ್ಷಗಾನ ಮಂಡಳಿ, ಸಾಂತಾಕ್ರೂಜ್ ಇವರು ‘ಮೈಮೆದಪ್ಪೆ ಮಂತ್ರದೇವತೆ’ ಎಂಬ ತುಳು ಪ್ರಸಂಗವನ್ನು ಯಕ್ಷಗಾನ ಬಯಲಾಟ ರೂಪದಲ್ಲಿ ಪ್ರದರ್ಶಿಸಲಿರುವರು.