ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಅನಾರೋಗ್ಯ ಪೀಡಿತರಿಗೆ ಸಹಾಯಧನ ವಿತರಣಾ ಕಾರ್ಯಕ್ರಮವು ಸಂಘದ ಆಡಳಿತ ಕಚೇರಿಯಲ್ಲಿ ಏಪ್ರಿಲ್ 10 ರಂದು ನಡೆಯಿತು. ಫಲಾನುಭವಿಗಳಿಗೆ ಸಹಾಯಧನವನ್ನು ವಿತರಿಸಿ ಮಾತನಾಡಿದ ಸಂಘದ ಮಹಾಪೋಷಕರಾದ ಆನಗಳ್ಳಿ ಕರುಣಾಕರ ಹೆಗ್ಡೆ, ಸಂಘದ ವತಿಯಿಂದ ನೀಡುವ ಸಹಾಯಧನವನ್ನು ಸಮರ್ಪಕವಾಗಿ, ಸರಿಯಾದ ರೀತಿಯಲ್ಲಿ ತಾವು ಬಳಸಿಕೊಳ್ಳಬೇಕು ಎಂದು ಹೇಳಿದರು.

ಕುಂದಾಪುರ ಯುವ ಬಂಟರ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ನಿತೀಶ್ ಶೆಟ್ಟಿ ಬಸ್ರೂರು, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು, ಹಿರಿಯ ಉಪಾಧ್ಯಕ್ಷರಾದ ರವಿಶಂಕರ್ ಹೆಗ್ಡೆ ದಬ್ಬಾಡಿ, ಕ್ರೀಡಾ ಸಂಚಾಲಕ ಅರುಣ್ ಕುಮಾರ್ ಶೆಟ್ಟಿ ಕುಂದಾಪುರ, ಉದಯ್ ಶೆಟ್ಟಿ ಹೊಸಂಗಡಿ ಮತ್ತು ಬೇರೆ ಬೇರೆ ಊರುಗಳಿಂದ ಬಂದ ಫಲಾನುಭವಿಗಳು ಉಪಸ್ಥಿತರಿದ್ದರು.





































































































