ಜಾಗತಿಕ ಬಂಟರ ಸಂಘದ ವತಿಯಿಂದ ಬಹು ನಿರೀಕ್ಷೆಯ ನೂತನ ತೆರೆದ ಸಭಾ ಭವನ ಮೂಲ್ಕಿ ರಾಷ್ಟೀಯ ಹೆದ್ದಾರಿ ಪಕ್ಕ ನಿರ್ಮಾಣವಾಗುತ್ತಿದ್ದು, ಒಂದು ಮಾದರಿ ಸಭಾಭವನವಾಗಿದೆ ಎಂದು ಜಾಗತಿಕ ಬಂಟರ ಸಂಘದ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಹೇಳಿದರು.
ಮೂಲ್ಕಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ತೆರೆದ ಸಭಾಭವನದ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ಮದುವೆ, ಮೆಹಂದಿ, ಯಕ್ಷಗಾನ, ನಾಟಕ ಮತ್ತಿತರ ಯಾವುದೇ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ಸಭಾಭವನ ನಿರ್ಮಾಣವಾಗುತ್ತಿದೆ. ಈಗಾಗಲೇ ಕಾರ್ಯಕ್ರಮದ ಮುಂಗಡ ಬುಕಿಂಗ್ ಕೂಡ ಬಂದಿದೆ. ಐಕಳ ಹರೀಶ್ ಶೆಟ್ಟಿ ಅವರು ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಸಂಘ ಮತ್ತು ವಿಶೇಷ ಯೋಜನೆಗಳಿಂದ ಗಮನ ಸೆಳೆಯುತ್ತದೆ. ಶಿಕ್ಷಣ ಆರೋಗ್ಯ, ಮನೆ ನಿರ್ಮಾಣಕ್ಕೆ ಸಹಾಯ ಹಸ್ತ ನೀಡುತ್ತಿದ್ದು ಇದಕ್ಕಾಗಿ ಸಾಕಷ್ಟು ಹಣ ವ್ಯಯಿಸಲಾಗಿದೆ. ಹರೀಶ್ ಶೆಟ್ಟಿಯವರ ಕಾರ್ಯ ಶೈಲಿಯಿಂದ ಸಂಘ ದಿನದಿಂದ ದಿನಕ್ಕೆ ಉನ್ನತ ಮಟ್ಟಕ್ಕೆ ಏರುತ್ತಿದೆ ಎಂದರು.
ಮೂಲ್ಕಿಯಲ್ಲಿ ನಿರ್ಮಾಣವಾಗುತ್ತಿರುವ ತೆರೆದ ಸಭಾಭವನ ಕಾಮಗಾರಿಯನ್ನು ಕನ್ಯಾನ ಸದಾಶಿವ ಶೆಟ್ಟಿ ಪರಿಶೀಲನೆ ನಡೆಸಿದರು. ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮಾತನಾಡಿದರು.
ಜಾಗತಿಕ ಬಂಟರ ಸಂಘದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಸಾಯರಾಧ ಗ್ರೂಪ್ ನ ರವಿ. ಎಸ್ ಶೆಟ್ಟಿ ಜಾಗತಿಕ ಬಂಟರ ಸಂಘದ ಒಕ್ಕೂಟದ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ ಜಾಗತಿಕ ಬಂಟರ ಸಂಘದ ಒಕ್ಕೂಟದ ನಿರ್ದೇಶಕ ಇನ್ನಂಜೆ ಶಶಿಧರ ಶೆಟ್ಟಿ, ಜೀವನ್ ಮೂಲ್ಕಿ, ಶರತ್ ಶೆಟ್ಟಿ ಕಿನ್ನಿಗೋಳಿ, ರವಿರಾಜ್ ಶೆಟ್ಟಿ ಜತ್ತಬೆಟ್ಟು, ಕೊಲ್ಲಾಡಿ ಬಾಲಕೃಷ್ಣ ರೈ ಸಭಾಭವನದ ಗುತ್ತಿಗೆದಾರ ಗುರುಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.