ಡಾ. ರವಿ ಶೆಟ್ಟಿಯವರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿದ್ದು, ಕಳೆದ ವರ್ಷ ಬಹಳ ವಿಜೃಂಭಣೆಯಿಂದ ನಡೆದ ಪುಣಚ ಮಹಿಷಮರ್ಧಿನಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಸಮಿತಿಯ ಅಧ್ಯಕ್ಷರಾಗಿದ್ದರು. ಅಲ್ಲದೇ ಗುರುಪುರ ಮೂಳೂರು ಶ್ರೀ ವೈದ್ಯನಾಥ ದೈವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾಗಿ ಮತ್ತು ಹಲವಾರು ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ತುಳುಕೂಟ ಕತಾರ್ ನ ಪೋಷಕರಾಗಿ, ಮೂರು ಬಾರಿ ಅಧ್ಯಕ್ಷರಾಗಿ, ಈ ಹಿಂದೆ ಕರ್ನಾಟಕ ಸಂಘ ಕತಾರಿನ ಉಪಾಧ್ಯಕ್ಷರಾಗಿ, ಬಂಟ್ಸ್ ಕತಾರಿನ ಸಂಸ್ಥಾಪಕ ಅಧ್ಯಕ್ಷರಾಗಿ, ಭಾರತೀಯ ರಾಯಭಾರಿ ಕಚೇರಿಯ ಅಧೀನದಲ್ಲಿರುವ ಐಸಿಬಿಎಫ್, ಐಸಿಪಿಸಿಯ ಸಲಹಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಕರ್ನಾಟಕ ಸಂಘ ಕತಾರಿನ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು ಈ ಸಂದರ್ಭದಲ್ಲಿ ಡಾ. ರವಿ ಶೆಟ್ಟಿ ಮೂಡಂಬೈಲು ಅವರು ಅಧ್ಯಕ್ಷರಾಗಿರುವುದು ಬಂಟ ಸಮಾಜ ಬಾಂಧವರೆಲ್ಲರಿಗೂ ಖುಷಿ ತಂದಿದೆ.