ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಮೇ 21, 22 ರಂದು ಸಂಸ್ಥೆಯ ಶಿಕ್ಷಕ ವೃಂದದವರಿಗೆ ತರಗತಿ ನಿರ್ವಹಣೆ ಕೌಶಲ್ಯಗಳ ಕುರಿತು ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಉಡುಪಿಯ ಪೆÇೀದಾರ್ ಇಂಟರ್ನ್ಯಾಷನಲ್ ಸ್ಕೂಲ್ನ ಪ್ರಾಂಶುಪಾಲರಾದ ಉದಯ್ ಕುಮಾರ್ ಎ.ಎನ್, ನಿಟ್ಟೆಯ ಎನ್.ಎಸ್.ಎ.ಎಮ್ ಆಂಗ್ಲಮಾಧ್ಯಮ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ರಾಧಾ ಪ್ರಭು ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.
ಜಿ ಎಮ್ನ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಮಾತನಾಡಿ ಮಕ್ಕಳು ಇಂದು ಚತುರರಾಗಿದ್ದಾರೆ. ಆಧುನಿಕತೆಗೆ ತಕ್ಕಂತೆ ನಮ್ಮ ಜ್ಞಾನ ನವೀಕರಣಗೊಂಡಾಗ ಮಾತ್ರ ಮಕ್ಕಳ ಮನಸ್ಸನ್ನು ಗೆಲ್ಲಲು ಸಾಧ್ಯವೆಂದರು.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಜಿ ಎಮ್ನ ಧ್ಯೇಯ ಮಕ್ಕಳ ಸರ್ವತೋಮುಖ ಅಭಿವೃದ್ಧಿಯಾಗಿದೆ. ಇದಕ್ಕೆ ಸಾಕಷ್ಟು ಪೂರ್ವಸಿದ್ಧತೆ, ಯೋಜನೆಗಳು ಮುಖ್ಯ. ಈ ನಿಟ್ಟಿನಲ್ಲಿ ಶಾಲಾ ಪ್ರಾರಂಭದ ಮೊದಲೇ ಶಿಕ್ಷಕರಿಗೆ ಮತ್ತು ಪೋಷಕರಿಗೆ ಹಲವಾರು ಕಾರ್ಯಾಗಾರಗಳನ್ನು ಆಯೋಜಿಸಲಾಗಿದೆ.
ಇದನ್ನು ಎಲ್ಲಾ ಶಿಕ್ಷಕರು ಹಾಗೂ ಪೋಷಕರ ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಎರಡು ದಿನಗಳ ಕಾರ್ಯಾಗಾರದಲ್ಲಿ ಪರಿಣಾಮಕಾರಿ ತರಗತಿ ನಿರ್ವಹಣೆಯ ಕೌಶಲ್ಯ, ಸಮಯ ಪಾಲನೆ, ಶಿಸ್ತು, ಮಾನಸಿಕ ಸ್ವಾಸ್ಥ್ಯ, ಪರಿಣಾಮಕಾರಿ ಬೋಧನೆ ಮತ್ತು ಕಲಿಕೆ, ಪಾಠ ಯೋಜನೆ ಮತ್ತು ಅನ್ವಯ ಮುಂತಾದ ವಿಷಯಗಳ ಕುರಿತು ಪ್ರಾತ್ಯಕ್ಷಿಕ ತರಬೇತಿಯನ್ನು ನೀಡಲಾಯಿತು.