ಲಯನ್ಸ್ ಕ್ಲಬ್ ಮುಂಡ್ಕೂರು ಕಡಂದಲೆ ಇವರ ಆಶ್ರಯದಲ್ಲಿ ಹಾಗೂ ಎಜೆ ಹಾಸ್ಪಿಟಲ್ ಅಂಡ್ ರಿಸರ್ಚ್ ಸೆಂಟರ್ ಮಂಗಳೂರು ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಸಭಾಭವನದಲ್ಲಿ ನಡೆಯಿತು. ದೇವಳದ ಪ್ರಧಾನ ಅರ್ಚಕ ಶ್ರೀ ರಾಮದಾಸ್ ಆಚಾರ್ಯ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀ ಸುರೇಂದ್ರ ಶೆಟ್ಟಿ ಕೋರಿಬೆಟ್ಟುಗುತ್ತು ಹಾಗೂ ಬ್ಲಡ್ ಬ್ಯಾಂಕ್ ಮ್ಯಾನೇಜರ್ ಗೋಪಾಲಕೃಷ್ಣ, ಗ್ರಾಮ ಪಂಚಾಯತ್ ಅಧ್ಯಕ್ಷ ದೇವಪ್ಪ ಸಫಲಿಗ, ಬಿಲ್ಲವ ವೇದಿಕೆ ಅಧ್ಯಕ್ಷ ಹರೀಶ್ ಸಚ್ಚೇರಿಪೇಟೆ, ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಹರೀಶ ಸಫಲಿಗ, ನಮ್ಮ ಜವನೆರ್ ಅಧ್ಯಕ್ಷ ಗುರುತಿಲಕ್, ನಿತ್ಯಾನಂದ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಕಿಶನ್ ಶೆಟ್ಟಿ ಹಾಗೂ ಜಯರಾಮ ಪೊಸ್ರಾಲ್ ಉಪಸ್ಥಿತರಿದ್ದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಸಂದೀಪ್ ಶೆಟ್ಟಿ ಸಚ್ಚರಪರಾರಿ ಅಧ್ಯಕ್ಷತೆ ವಹಿಸಿದ್ದರು. ಸುಮಾರು ಐವತ್ತಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತವಾಗಿ ದಾನಿಗಳು ರಕ್ತದಾನ ಮಾಡಿದರು.