ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೃಹ ಚೇತನ ಯೋಜನೆಯಡಿ ಆಯ್ಕೆಯಾದ ಕುಂದಾಪುರ ತಾಲೂಕು ಕಮಲಶಿಲೆ ಗ್ರಾಮದ ಶ್ರೀಮತಿ ಸ್ವಾತಿ ಶೆಟ್ಟಿ ಇವರಿಗೆ ಸಂಘದ ದಶಮ ಸಂಭ್ರಮದ ಮಹಾಪೋಷಕರಾದ ಶ್ರೀ ಎಚ್. ಚಂದ್ರ ಶೆಟ್ಟಿ ಹೋಟೆಲ್ ಉದ್ಯಮಿ ಹೈದರಾಬಾದ್ ಇವರ ಶಿಫಾರಸಿನ ಮೇರೆಗೆ 50,000 ರೂಪಾಯಿ ಹಣವನ್ನು ಹಾಗೂ ಕುಂದಾಪುರ ತಾಲೂಕು ಕೊರ್ಗಿ ಗ್ರಾಮದ ದಬ್ಬೆಕಟ್ಟೆ ನಿವಾಸಿ ಶ್ರೀಮತಿ ಕುಸುಮ ಶೆಟ್ಟಿ ಇವರಿಗೆ ಸಂಘದ ದಶಮ ಸಂಭ್ರಮದ ಪೋಷಕರಾದ ಹೈದರಾಬಾದ್ ಹೋಟೆಲ್ ಉದ್ಯಮಿಗಳಾದ ಶ್ರೀ ಸಳ್ವಾಡಿ ಚಂದ್ರಶೇಖರ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಂಘದ ವತಿಯಿಂದ 30000 ರೂಪಾಯಿ ಹಣವನ್ನು ಚೆಕ್ ಮೂಲಕ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಬಿ. ಉದಯ್ ಕುಮಾರ್ ಶೆಟ್ಟಿ, ದಶಮ ಸಂಭ್ರಮದ ಮಹಾ ಪೋಷಕರಾದ ಹೈದರಾಬಾದ್ ಹೋಟೆಲ್ ಉದ್ಯಮಿಗಳಾದ ಶ್ರೀ ಹೆಚ್ ಚಂದ್ರ ಶೆಟ್ಟಿ, ಪೋಷಕರಾದ ಅಲ್ತಾರು ಸುಧಾಕರ ಶೆಟ್ಟಿ, ಶ್ರೀ ಸಳ್ವಾಡಿ ಚಂದ್ರಶೇಖರ್ ಶೆಟ್ಟಿ ಹಾಗೂ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ನಿತೀಶ್ ಶೆಟ್ಟಿ ಬಸ್ರೂರು ಉಪಸ್ಥಿತರಿದ್ದರು.

















































































































