ಉಡುಪಿಯ ಅಷ್ಟಮಠಗಳಲ್ಲಿ ಒಂದಾಗಿರುವ ಶ್ರೀ ಶಿರೂರು ಮಠದ ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ ಮತ್ತು ಮಠದ ದಿವಾನರಾದ ಉದಯ ಸರಳತ್ತಾಯ ಹಾಗೂ ಶ್ರೀಶ ಭಟ್ ಕಡೆಕಾರ್ ಅವರು ಮೇ 29 ರಂದು ಜಿರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಕಾಪುವಿನ ಅಮ್ಮನ ದರುಶನವನ್ನು ಪಡೆದು ಶ್ರೀದೇವಿಗೆ ದೀಪ ಬೆಳಗಿ, ನವದುರ್ಗಾ ಮಂಟಪದಲ್ಲಿ ಆಶೀರ್ವಚನ ನೀಡಿದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿಯವರ ಸಮ್ಮುಖದಲ್ಲಿ ಜಿರ್ಣೋದ್ಧಾರ ಕಾಮಗಾರಿಗಳನ್ನು ವೀಕ್ಷಿಸಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು ಭಕ್ತರು ಬರೇ ಭಾರತ ದೇಶದಲ್ಲಿ ಮಾತ್ರ ಅಲ್ಲ, ಪ್ರಪಂಚಾದ್ಯಂತ ನೆಲೆಸಿದ್ದಾರೆ. ದೇವರ ಸೇವೆ ಮಾಡಲು ಇದೊಂದು ಅವಕಾಶ. ಇಲ್ಲಿಗೆ ಬಂದು ಕಣ್ತುಂಬಿಕೊಳ್ಳಬೇಕು. ನಿರ್ಮಾಣ ಕಾರ್ಯಕ್ಕೆ ಸಹಕರಿಸಬೇಕು. ಎಲ್ಲರಿಗೂ ಇದು ನಮ್ಮ ದೇವಸ್ಥಾನ ಎಂಬ ಭಾವನೆ ಬರಬೇಕು. ಪರಮಾತ್ಮನ ಅನುಗ್ರಹವಿರಲಿ ಎಂದರು.
ದೇವಳದ ಪ್ರಧಾನ ಅರ್ಚಕರಾದ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯಾ, ಜಿರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಗೌರವಾಧ್ಯಕ್ಷ ಅನಿಲ್ ಬಲ್ಲಾಳ್ ಕಾಪು ಬೀಡು, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಉಪಾಧ್ಯಕ್ಷರುಗಳಾದ ಕಾಪು ದಿವಾಕರ ಶೆಟ್ಟಿ, ಮಾದವ ಆರ್ ಪಾಲನ್, ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕ ಉದಯ ಸುಂದರ್ ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಗೌರವ ಸಲಹೆಗಾರ ನಿರ್ಮಲ್ ಕುಮಾರ್ ಹೆಗ್ಡೆ, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕ ಶ್ರೀಕರ ಶೆಟ್ಟಿ ಕಲ್ಯಾ, ಡಾ. ಸೀತಾರಾಮ್ ಭಟ್, ಕಛೇರಿ ನಿರ್ವಹಣಾ ಸಮಿತಿಯ ಪ್ರಧಾನ ಸಂಚಾಲಕ ಮಧುಕರ್ ಎಸ್, ಪ್ರಚಾರ ಸಮಿತಿ ಸಂಚಾಲಕ ಜಯರಾಮ್ ಆಚಾರ್ಯ, ಶ್ರೀಧರ್ ಕಾಂಚನ್, ಗ್ರಾಮ ಸಮಿತಿಯ ಮಹಿಳಾ ಮುಖ್ಯ ಸಂಚಾಲಕರುಗಳಾದ ಗೀತಾಂಜಲಿ ಸುವರ್ಣ, ಶಿಲ್ಪಾ. ಜಿ. ಸುವರ್ಣ, ಶೈಲಪುತ್ರಿ ತಂಡದ ಸಂಚಾಲಕರುಗಳಾದ ರವಿ ಭಟ್ ಮಂದಾರ, ಲಕ್ಷ್ಮೀಶ ತಂತ್ರಿ, ರಾಧಾರಮಣ ಶಾಸ್ತ್ರಿ ಮತ್ತು ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.