ಪಾಂಗಾಳ ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ವೈಯುಕ್ತಿಕವಾಗಿ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ಉಚಿತ ಬರವಣಿಗೆ ಪುಸ್ತಕವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳಾದ ಗೋವಿಂದ ಶೆಟ್ಟಿ, ಮುಖ್ಯ ಶಿಕ್ಷಕರಾದ ಫ್ರಾನ್ಸಿಸ್ ಮೆನೇಜಸ್, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಭೋಜರಾಜ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರಾದ ಯಶೋಧ ಹಾಗೂ ಸಹ ಶಿಕ್ಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.






































































































