ಸಮಾಜದಲ್ಲಿ ನೊಂದವರ ಮತ್ತು ಬಡವರ ಸೇವೆಯೇ ನಮ್ಮ ಟ್ರಸ್ಟ್ ಮೂಲ ಧ್ಯೇಯವಾಗಿದೆ ಎಂದು ರೈ ಎಸ್ಟೇಟ್ಸ್ ಆಂಡ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಹೇಳಿದರು.ಅವರು ಪುತ್ತೂರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಅರ್ಕ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಾದ ಇಬ್ರಾಹಿಂ, ಖಾದರ್ ಕಲ್ಲಂದಡ್ಕ ಮತ್ತು ಬಾಲಕೃಷ್ಣ ಇವರು ಕೊಡುಗೆಯಾಗಿ ನೀಡಿದ ಕೊಡೆಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕೊಡಿಪ್ಪಾಡಿ ಗ್ರಾ.ಪಂ ಅಧ್ಯಕ್ಷ ಸೋಮಪ್ಪ ಪೂಜಾರಿ, ಕೇಶವ ಪೆಲತ್ತಡಿ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸುರೇಖಾ ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಸುರೇಖಾ ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಚಿತ್ರಕಲಾ ಸ್ವಾಗತಿಸಿ, ಸಹ ಶಿಕ್ಷಕಿ ಅಶ್ವಿನಿ ವಂದಿಸಿದರು.
