ಪುಣೆಯ ಬೇಬಿ ಕ್ಲಿನಿಕ್ ನ ಖ್ಯಾತ ಮಕ್ಕಳ ತಜ್ಞ ಮೂಡುಬಿದಿರೆ ಮೂಲದ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಸುಧಾಕರ ಶೆಟ್ಟಿ ಅವರಿಗೆ ಮುಂಬಯಿಯ ಕುರ್ಲಾ ಬಂಟರ ಭವನದ ರಾಧಾಬಾಯಿ ಟಿ.ಭಂಡಾರಿ ಸಭಾಗೃಹದಲ್ಲಿ ಭಾನುವಾರ ನಡೆದ “ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ” ಕಾರ್ಯಕ್ರಮದಲ್ಲಿ “ಹೊರನಾಡ ಕನ್ನಡ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕರ್ನಾಟಕ ಸಂಘ ಅಂಧೇರಿ ಇದರ ಆಶ್ರಯದಲ್ಲಿ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಡಾ. ಸುಧಾಕರ ಶೆಟ್ಟಿ ಅವರ ಮೂರು ದಶಕಗಳ ವೈದ್ಯಕೀಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಯಿತು.
ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಹೇರಂಬ ಇಂಡಸ್ಟ್ರೀಸ್ ನ ಸಿಎಂಡಿ ಕನ್ಯಾನ ಸದಾಶಿವ ಶೆಟ್ಟಿ, ಪ್ರವೀಣ್ ಶೆಟ್ಟಿ ಪುತ್ತೂರು, ಸೂರಜ್ ಶೆಟ್ಟಿ, ಕೃಷ್ಣ ಶೆಟ್ಟಿ ಮತ್ತಿತರ ಪ್ರಮುಖರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಿತು.