ಭಾರತೀಯ ವಿಕಾಸ್ ಟ್ರಸ್ಟ್ ಸಹಯೋಗದೊಂದಿಗೆ ಪಡುಬಿದ್ರಿಯ ವಿಶೇಷ ಆರ್ಥಿಕ ವಲಯದಲ್ಲಿನ ಆಸ್ಪೆನ್ ಇನ್ಫ್ರಾ ಕಂಪೆನಿಯ ಮೂಲಕ 2023-24 ನೇ ಸಾಲಿನ ಸಿ.ಎಸ್.ಆರ್ ನಿಧಿಯಿಂದ ಅನುಷ್ಠಾನಿಸಲಾದ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ದಿನಾಂಕ 08-06-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿದರು.
ಶಾಸಕರು ಮಾತನಾಡಿ ಆಸ್ಪೆನ್ ಇನ್ಫ್ರಾ ಕಂಪೆನಿಯು ಸಂಸ್ಥೆಗೆ ಬಂದ ಲಾಭಾಂಶದ ಪಾಲನ್ನು ಸಮಾಜಕ್ಕೆ ನೀಡುವ ಕಾರ್ಯವನ್ನು ಮಾಡುತ್ತಿದ್ದಾರೆ. ಶಾಸಕನಾಗಿ ಈ ಸಂಸ್ಥೆಯನ್ನು ಅಭಿನಂದಿಸುತ್ತೇನೆ ಎಂದು ಹೇಳಿದ ಅವರು ಇಂತಹ ಸಮಾಜಮುಖಿ ಕಾರ್ಯ ಹೆಚ್ಚು ಹೆಚ್ಚು ನಡೆಯಬೇಕು ಎಂದರು.
ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ಮಟ್ಟಾರು ರತ್ನಾಕರ ಹೆಗ್ಡೆ, ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ, ಪಡುಬಿದ್ರಿ ಬಂಟ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವೈ. ಶಶಿಧರ್ ಶೆಟ್ಟಿ, ಪಡುಬಿದ್ರಿ ಎಸ್.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್, ಮಣಿಪಾಲ ಭಾರತೀಯ ವಿಕಾಸ್ ಟ್ರಸ್ಟ್ ನ ಜಗದೀಶ್ ಎ ಪೈ, ಆಸ್ಪೆನ್ ಇನ್ಫ್ರಾ ಕಂಪೆನಿಯ ಮಹಾ ಪ್ರಬಂಧಕರಾದ ಅಶೋಕ್ ಕುಮಾರ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತರಾದ ಶಶಿಕಾಂತ್ ಪಡುಬಿದ್ರಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೌಮ್ಯಲತಾ ಶೆಟ್ಟಿ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಸದಸ್ಯರಾದ ಅಬ್ದುಲ್ ಆಸೀಜ್ ಉಪಸ್ಥಿತರಿದ್ದರು.