ಎರಡನೇ ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜಾರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಗೌರವಿಸಿದರು. ವಿಧಾನ ಪರಿಷತ್ ಸದಸ್ಯರಾಗಿ ನಿಮ್ಮ ಸೇವಾ ಅವಧಿಯಲ್ಲಿ ಸಮಾಜಕ್ಕೆ ಉತ್ತಮ ಕೆಲಸ ಕಾರ್ಯಗಳು ನಡೆಯಲಿ ಎಂದು ಐಕಳ ಹರೀಶ್ ಶೆಟ್ಟಿ ಶುಭ ಹಾರೈಸಿದರು.ಈ ವೇಳೆ ಮಾತನಾಡಿದ ಐವನ್ ಡಿ ಸೋಜಾ ಅವರು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಕಷ್ಟಗಳನ್ನು ನಿವಾರಿಸುವ ಕೆಲಸದಲ್ಲಿ ತೊಡಗಿದೆ. ವಿಧಾನ ಪರಿಷತ್ ಸದಸ್ಯನಾಗಿ ತಾನು ಬಂಟರ ಯಾವುದೇ ಕೆಲಸ ಕಾರ್ಯ ಇದ್ದರೂ ಸ್ಪಂದಿಸಿ ಕೆಲಸ ಮಾಡುವುದಾಗಿ ತಿಳಿಸಿದರು. ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ನಿಯೋಗದಲ್ಲಿ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಕೊಲ್ಲಾಡಿ ಬಾಲಕೃಷ್ಣ ರೈ, ಹೇಮಂತ್ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು.