ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಎಚ್.ಪಿ.ಆರ್ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಹರಿಪ್ರಸಾದ್ ರೈ ಅವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಹಾಗೂ ಗೌರವ ಕಾರ್ಯದರ್ಶಿ ಶ್ರೀ ಜಯಕರ್ ಶೆಟ್ಟಿ ಇಂದ್ರಾಳಿಯವರ ವಿಶೇಷ ಮನವಿಗೆ ಸ್ಪಂದಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ ಸದಸ್ಯರಾಗಿ ಸೇರ್ಪಡೆಗೊಂಡರು.ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಸಮಾಜ ಸೇವಕ ಹರಿಪ್ರಸಾದ್ ರೈ ಅವರನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಹೂಗುಚ್ಚ ನೀಡಿ ಒಕ್ಕೂಟಕ್ಕೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ ಮತ್ತು ಗೌರವ ಕಾರ್ಯದರ್ಶಿ ಜಯಕರ್ ಶೆಟ್ಟಿಯವರು ಉಪಸ್ಥಿತರಿದ್ದರು.