ವಿದ್ಯಾಗಿರಿ: ಭಾಷಾ ಶಾಸ್ತ್ರದಲ್ಲಿ ಪರಿಣಿತಿ ಹೊಂದಿದಾಗ ಇಂಗ್ಲಿಷ್ ಅಧ್ಯಯನ ಸುಲಲಿತವಾಗುತ್ತದೆ ಎಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಡಾ. ಪ್ರಸಾದ್ ರಾವ್ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಇಂಗ್ಲಿಷ್ ವಿಭಾಗದ ವತಿಯಿಂದ ಕಾಲೇಜಿನ ಎ.ವಿ ಹಾಲ್ ನಲ್ಲಿ ಬುಧವಾರ ನಡೆದ ಭಾμÁಶಾಸ್ತ್ರ ವಿಷಯದ ಕುರಿತ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಇತ್ತೀಚಿನ ದಿನಗಳ ಶಿಕ್ಷಣ ವ್ಯವಸ್ಥೆಯಲ್ಲಿ ತಜ್ಞ ಅಧ್ಯಾಪಕರ ಕೊರತೆ ಇದೆ ಎಂದು ಸಾಮಾನ್ಯವಾಗಿ ಹೇಳುತ್ತಾರೆ. ಆದರೆ ಇದು ಸತ್ಯಕ್ಕೆ ದೂರವಾದ ಮಾತು. ವಿದ್ಯಾರ್ಥಿಗಳು ಜ್ಞಾನದ ಅನ್ವೇಷಣೆಯಲ್ಲಿ ಪರಿಣಾಮಕಾರಿಯಾಗಿ ತೊಡಗಿಸಿಕೊಂಡರೆ, ಅಧ್ಯಾಪಕರೊಂದಿಗೆ ಚರ್ಚಿಸಿದರೆ, ಅಧ್ಯಾಪಕರು ಜ್ಞಾನವನ್ನು ವೃದ್ಧಿಸಿಕೊಳ್ಳಲು ಹೆಚ್ಚು ಶ್ರಮವನ್ನು ವಹಿಸುತ್ತಾರೆ ಎಂದರು. ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಆಳ್ವಾಸ್ ಕಾಲೇಜಿನ ಕುಲಸಚಿವ (ಅಕಾಡೆಮಿಕ್ಸ್) ಡಾ.ಟಿ ಕೆ ರವಿಚಂದ್ರನ್ ಸ್ವಾಗತಿಸಿ, ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಪವಿತ್ರ ತೇಜ್ ನಿರೂಪಿಸಿ, ವಂದಿಸಿದರು.





































































































