ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಕೋಡಿಕಲ್ ಗುರುನಗರದ ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಮಂದಿರ (ಎಸ್ ಎನ್ ಡಿಪಿ)ದಲ್ಲಿ ವಿಶ್ವಯೋಗ ದಿನಾಚರಣೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಋಷಿ ಪರಂಪರೆಯಿಂದ ಪರಿಚಿತವಾದ ಯೋಗ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯತ್ನದಿಂದ ಇಡೀ ವಿಶ್ವಕ್ಕೆ ಪಸರಿಸಿದೆ. ನಿರಂತರ ಯೋಗಾಭ್ಯಾಸದಿಂದ ಬದುಕಿಗೆ ಸ್ಫೂರ್ತಿ ದೊರೆಯುತ್ತದೆ ಎಂದರು.
ರೆಡ್ ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್, ನಿವೃತ್ತ ಅಪರ ಜಿಲ್ಲಾಧಿಕಾರಿ ಎಸ್.ಎ ಪ್ರಭಾಕರ ಶರ್ಮ, ಕೋಡಿಕಲ್ ಎಸ್ ಎನ್ ಡಿಪಿ ಮಂದಿರದ ಅಧ್ಯಕ್ಷ ಪದ್ಮನಾಭ ಕಾರ್ನಾಡ್, ಕಾರ್ಪೊರೇಟರ್ ಗಳಾದ ಕಿರಣ್ ಕೋಡಿಕಲ್, ಮನೋಜ್ ಕೋಡಿಕಲ್ ಮುಖ್ಯ ಅತಿಥಿಗಳಾಗಿದ್ದರು.
ಸನ್ಮಾನ ಕಾರ್ಯಕ್ರಮ : ರೆಡ್ ಕ್ರಾಸ್ ನ ಖಜಾಂಚಿ ಮೋಹನ್ ಶೆಟ್ಟಿ, ಆಡಳಿತ ಮಂಡಳಿ ನಿರ್ದೇಶಕರಾದ ಡಾ. ಸುಮನಾ ಬೋಳಾರ್, ಗುರುದತ್ ನಾಯಕ್, ಪಿ.ಬಿ. ಹರೀಶ್ ರೈ, ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ ಇದ್ದರು. ಕಾರ್ಯಕ್ರಮದ ನೇತೃತ್ವ ವಹಿಸಿದ ಯೋಗಗುರು ಎಂ. ಜಗದೀಶ್ ಶೆಟ್ಟಿ ಬಿಜೈ ಅವರನ್ನು ರೆಡ್ ಕ್ರಾಸ್ ನಿಂದ ಸನ್ಮಾನಿಸಲಾಯಿತು.