ಪ್ರಕೃತಿಯ ಜತೆ ಮನುಷ್ಯನಿಗೆ ಅವಿನಾಭಾವ ಸಂಬಂಧ ಇದೆ. ಕ್ಯಾನ್ಸರ್ ನಂತಹ ಮಾರಕ ಕಾಯಿಲೆಯನ್ನು ಗುಣಪಡಿಸುವ ಔಷಧೀಯ ಗಿಡಗಳು ಪ್ರಕೃತಿಯಲ್ಲಿದ್ದು, ಇಂತಹ ಅಮೂಲ್ಯ ಸಸ್ಯ ಸಂಪತ್ತನ್ನು ಸಂರಕ್ಷಿಸುವ ಮಹತ್ವದ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಜನ ಶಿಕ್ಷಣ ಟ್ರಸ್ಟ್ ನ ನಿರ್ದೇಶಕ ಶೀನ ಶೆಟ್ಟಿ ಹೇಳಿದರು.
ಅಖಿಲ ಭಾರತೀಯ ಸಾಹಿತ್ಯ ಪರಿಷತ್ ನ ಮಂಗಳೂರು ತಾಲೂಕು ಘಟಕದ ವತಿಯಿಂದ ಜನಶಿಕ್ಷಣ ಟ್ರಸ್ಟ್ ಮುಡಿಪು, ಜನಜೀವನ ಬಾಳೆಪುಣಿ ಮತ್ತು ಚಿತ್ತಾರ ಬಳಗದ ಸಹಯೋಗದಲ್ಲಿ ಜನಶಿಕ್ಷಣ ಟ್ರಸ್ಟ್ ನ ಸಭಾಂಗಣದಲ್ಲಿ ನಡೆದ ಹಸಿರಾಗಿಸೋಣ ಪರಿಸರ ಸಂವಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಅಭಾಸಾಪ ಮಂಗಳೂರು ತಾಲೂಕು ಘಟಕದ ಅಧ್ಯಕ್ಷೆ ಡಾ. ಮೀನಾಕ್ಷಿ ರಾಮಚಂದ್ರ, ಅಭಾಸಾಪ ದ.ಕ. ಜಿಲ್ಲಾಧ್ಯಕ್ಷ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ಉದ್ಘಾಟಿಸಿದರು. ಜನಜೀವನ ಬಾಳೆಪುಣಿ ಅಧ್ಯಕ್ಷ ರಮೇಶ್ ಶೇಣವ ಅಧ್ಯಕ್ಷತೆ ವಹಿಸಿದ್ದರು. ಜನ ಶಿಕ್ಷಣ ಟ್ರಸ್ಟ್ ನ ತರಬೇತಿ ಕೇಂದ್ರದ ಶಿಕ್ಷಕಿ ಕಾವೇರಿ ಅವರನ್ನು ಸನ್ಮಾನಿಸಲಾಯಿತು. ನರಿಂಗಾನ ಗ್ರಾ.ಪಂ ಅಧ್ಯಕ್ಷ ಮಹಮ್ಮದ್ ನವಾಝ್, ಇರಾ ಗ್ರಾ.ಪಂ ಅಧ್ಯಕ್ಷ ಎಂ.ಬಿ ಉಮ್ಮರ್, ಜನ ಶಿಕ್ಷಣ ಟ್ರಸ್ಟ್ ನ ನಿರ್ದೇಶಕ ಕೃಷ್ಣ ಮೂಲ್ಯ ಇದ್ದರು. ಅಭಾಸಾಪ ಮಂಗಳೂರು ತಾಲೂಕು ಘಟಕದ ಉಪಾಧ್ಯಕ್ಷ ತುಪ್ಪೆಕಲ್ಲು ನರಸಿಂಹ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಚಂದ್ರಹಾಸ ಕಣಂತೂರು ಕಾರ್ಯಕ್ರಮ ನಿರೂಪಿಸಿದರು.