ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಯಕ್ಷದ್ರುವ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನಾ ಕಾರ್ಯಕ್ರಮವನ್ನು ಜೂನ್ 25 ರಂದು ಅತಿಥಿ ಅಭ್ಯಾಗತರಿಂದ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಮಂಗಳೂರು ಗ್ರಾಮಾಂತರ ಜಿಲ್ಲಾ ಗ್ರಾಮ ವಿಕಾಸ ಸಂಯೋಜಕರು, ಶ್ರೀರಾಮ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ಶ್ರೀರಾಮ ವಿದ್ಯಾ ಕೇಂದ್ರದ ಟ್ರಸ್ಟಿಗಳಾದ ಶ್ರೀ ಸುಜಿತ್ ಕುಮಾರ್ ಇವರು ಮಾತನಾಡಿ, “ಯಕ್ಷಗಾನವು ಶಿಕ್ಷಣದ ಜೊತೆ ಇರುವಂತಹ ಒಂದು ಕಲೆ. ಈ ಕಲೆಯನ್ನು ಮತ್ತು ಸಂಸ್ಕೃತಿಯನ್ನು ಉಳಿಸುವುದು ನಮ್ಮ ಕರ್ತವ್ಯ ಹಾಗೂ ವಿಶ್ವಗುರು ಭಾರತ ನಿರ್ಮಾಣದಲ್ಲಿ ಯಕ್ಷಗಾನದ ಕಲೆಯ ಪಾತ್ರವು ಮುಖ್ಯವಾಗಬೇಕೆಂದು” ತಿಳಿಸಿದರು.
ಇನ್ನೋರ್ವ ಅತಿಥಿಯಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ವಿಟ್ಲ ಘಟಕದ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಇವರ ಮಾತುಗಳಲ್ಲಿ “ಯಕ್ಷಗಾನವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ಯಕ್ಷಗಾನದ ಜೊತೆ ಸಮಾಜಕ್ಕೆ ನಮ್ಮಿಂದಾಗುವ ಸೇವೆ ಮಾಡಬೇಕು” ಎಂದು ಶುಭ ಹಾರೈಸಿದರು. ವಿಟ್ಲ ಘಟಕದ ಪ್ರಧಾನ ಕಾರ್ಯದರ್ಶಿ ನಿವೃತ್ತ ಉಪನ್ಯಾಸಕರಾದ ಪಿ ಪೂವಪ್ಪ ಶೆಟ್ಟಿ ಇವರ ಹಿತ ನುಡಿಗಳಲ್ಲಿ ಕಥೆಗಳನ್ನು ಮುಂದಿನ ಪೀಳಿಗೆಗೆ ತಿಳಿಸಲು ಇರುವ ಸುಲಭ ಸಾಧನ ಯಕ್ಷಗಾನ, ಅಳಿವಿನಂಚಿನಲ್ಲಿರುವ ಕಲೆಯನ್ನು ಪಟ್ಲ ಫೌಂಡೇಶನ್ ಸಂಸ್ಥಾಪಕರಾದ ಸತೀಶ್ ಶೆಟ್ಟಿ ಪಟ್ಲರವರು ಕಲೆಯ ಅಭಿಮಾನ ಹಾಗೂ ಛಲದಿಂದ ಯಕ್ಷಗಾನಕ್ಕೆ ಹೇಗೆ ಶ್ರಮಿಸಿದ್ದಾರೆ ಎಂಬುವುದರ ಬಗ್ಗೆ ತಿಳಿಸಿದರು.
ಯಕ್ಷಗಾನ ಶಿಕ್ಷಕರಾದ ಅಮ್ಮುಂಜೆ ಮೋಹನ್ ಕುಮಾರ್ ರವರು ವಿದ್ಯಾರ್ಥಿಗಳಿಗೆ ಯಕ್ಷಗಾನದ ಮೊದಲ ಹೆಜ್ಜೆಯ ತರಬೇತಿಯನ್ನು ಕೊಟ್ಟರು. ವೇದಿಕೆಯಲ್ಲಿ ಪಟ್ಲ ಫೌಂಡೇಶನ್ ವಿಟ್ಲ ಘಟಕದ ಪ್ರಧಾನ ಸಂಚಾಲಕರಾದ ಅರವಿಂದ ರೈ ಮೂರ್ಜೆಬೆಟ್ಟು ಹಾಗೂ ಶ್ರೀ ರಾಮ ಪ್ರೌಢಶಾಲೆಯ ಮುಖ್ಯ ಗುರುಗಳಾದ ಗೋಪಾಲ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕರಾದ ಜಿನ್ನಪ್ಪರವರು ಸ್ವಾಗತಿಸಿದರು. ಸಹ ಶಿಕ್ಷಕಿ ಮೇಘಶ್ರೀ ವಂದಿಸಿದರು. ಶ್ರೀವತ್ಸ ಪ್ರಾರ್ಥಿಸಿದರು. ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.