ಜಡ್ಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ LKG ಹಾಗೂ UKG ತರಗತಿಗಳ ಶುಭಾರಂಭವನ್ನು ಸ್ವಯಂಸ್ಪೂರ್ತಿ ಫೌಂಡೇಶನ್ ನ ನಾಗರಾಜ ಶೆಟ್ಟಿ ಜಡ್ಕಲ್ ಉದ್ಘಾಟಿಸಿದರು. ಶಾಲೆಗೆ ಬೆಂಚುಗಳನ್ನು,
ವಿದ್ಯಾರ್ಥಿಗಳಿಗೆ ಸಮವಸ್ತ್ರ, ನೋಟ್ ಪುಸ್ತಕ, ಪೆನ್ನು, ಐಡಿ ಕಾರ್ಡ್ ಗಳನ್ನು ವಿತರಿಸಲಾಯಿತು. ಜಡ್ಕಲ್ ಪಂಚಾಯತ್ ಅಧ್ಯಕ್ಷರಾದ ಪಾರ್ವತಿ, ಸದಸ್ಯರಾದ ಭಾರತಿ ಶೆಟ್ಟಿ, ಲಕ್ಷ್ಮಿ, ದೇವಿದಾಸ್ ವಿ ಜೆ, SDMC ಅಧ್ಯಕ್ಷರಾದ ಮಂಜುನಾಥ್ ನಾಯ್ಕ್, ಸ್ವಯಂಸ್ಪೂರ್ತಿ ಫೌಂಡೇಷನ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ರೋಶಮ್ಮ, ಸಮೃದ್ಧ ಬೈಂದೂರು ತಂಡದ ಸಂಯೋಜಕ ಶೋಧನ್ ಮಲ್ಪೆ ಉಪಸ್ಥಿತರಿದ್ದರು.
ಜಡ್ಕಲ್ ಅಂಗನವಾಡಿ ಕೇಂದ್ರಕ್ಕೆ ಕ್ರೀಡಾ ಸಾಮಾಗ್ರಿಗಳನ್ನು ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ವಿತರಿಸಲಾಯಿತು. ನಾಗರಾಜ ಶೆಟ್ಟಿ ಜಡ್ಕಲ್ ಅವರು ಉದ್ಘಾಟನಾ ಭಾಷಣದಲ್ಲಿ ತಾನು ಕಲಿತ ಜಡ್ಕಲ್ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ LKG ಹಾಗೂ UKG ತರಗತಿಗಳನ್ನು 2024 – 25 ಶೈಕ್ಷಣಿಕ ವರ್ಷದಿಂದ ಪ್ರಾರಂಭಿಸಿದ್ದು ಪಠ್ಯ ಪುಸ್ತಕ, ಸಮವಸ್ತ್ರ, ಐಡಿ ಕಾರ್ಡ್ಸ್, ಬೆಂಚುಗಳು, ನೋಟ್ ಬುಕ್, ಹಾಗೂ ಕ್ರೀಡಾ ಸಾಮಾಗ್ರಿಗಳನ್ನು ದಾನಿಗಳ ಸಹಾಯದಿಂದ ನೀಡಲಾಗಿದೆ. ಇವೆಲ್ಲವುಗಳ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಶಿಕ್ಷಕರ ಸಹಾಯದಿಂದ ಪಡೆಯಲಿ ಎಂದು ತಿಳಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.