ಚದುರಂಗ ಆಟಗಾರರ ಮೆದುಳನ್ನು ಜಾಗೃತಿಗೊಳಿಸುವ, ಬುದ್ಧಿಮತ್ತೆಯನ್ನು ಹೆಚ್ಚಿಸುವ ಕ್ರೀಡೆಯಾಗಿದೆ ಎಂದು ಪಡುಬಿದ್ರಿಯ ಆಸ್ಟ್ರಿನ್ ಇನ್ಫ್ರಾ ಪ್ರೈವೇಟ್ ಲಿ. ಸಂಸ್ಥೆಯ ಮಹಾಪ್ರಬಂಧಕ ಅಶೋಕ್ ಕುಮಾರ್ ಶೆಟ್ಟಿ ಹೇಳಿದರು. ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಉಡುಪಿ ಮತ್ತು ಕಾಪು ಇವರ ಆಶ್ರಯದಲ್ಲಿ ಕಾಪು ಶ್ರೀ ಹಳೇ ಮಾರಿಗುಡಿ ದೇವಸ್ಥಾನದ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ರಾಷ್ಟ್ರ ಮಟ್ಟದ ಫಿಡೆ ರೇಟೆಡ್ ರ್ಯಾಪಿಡ್ ಚೆಸ್ -22ನೇ ಶ್ರೀ ನಾರಾಯಣ ಗುರು ಟ್ರೋಫಿ ಚೆಸ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಾಪು ಶ್ರೀ ಹಳೆ ಮಾರಿಗುಡಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಶ್ರೀಧರ್ ಶೆಣೈ ಪಂದ್ಯಾಟ ಉದ್ಘಾಟಿಸಿದರು. ಮಂಗಳೂರು ಎಫಿಲೆನ್ಸ್ ಟೆಕ್ನಾಲಜೀಸ್ ಡಿಜಿಟಲ್ ಮಾರ್ಕೆಟಿಂಗ್ ಕಂಪನಿಯ ಸ್ಥಾಪಕ ಅವಿನಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಆಸ್ಟ್ರಿನ್ ಇನ್ಫ್ರಾ ಪ್ರೈವೇಟ್ ಲಿ. ನ ಮಹಾಪ್ರಬಂಧಕ ಅಶೋಕ್ ಕುಮಾರ್ ಶೆಟ್ಟಿ, ಕೈಪುಂಜಾಲು ವಿದ್ಯಾಸಾಗರ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ರಮೇಶ್ ಆರ್. ಪೂಜಾರಿ ಚೆಸ್ ಕಾಯಿಯನ್ನು ಮುನ್ನಡೆಸುವ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿದರು.
ಶ್ರೀ ನಾರಾಯಣ ಗುರು ಸ್ಪೋರ್ಟ್ಸ್ ಮತ್ತು ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಉಮಾನಾಥ್ ಕಾಪು, ಗಣ್ಯರಾದ ಲಕ್ಷ್ಮೀನಾರಾಯಣ ಆಚಾರ್ಯ, ನಾಗೇಶ್ ಕಾರಂತ್, ಮುಖ್ಯ ತೀರ್ಪುಗಾರ ವಸಂತ್ ಬಿ.ಎಚ್. ಬೆಂಗಳೂರು ಉಪಸ್ಥಿತರಿದ್ದರು. ಸಂಸ್ಥೆಯ ಸ್ಥಾಪಕ ಫಿಡೇ ಆರ್ಬಿಟರ್ ಮತ್ತು ಕೋಚ್ ಸಾಕ್ಷಾತ್ ಯು.ಕೆ. ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ನಿರ್ದೇಶಕಿ ಸೌಂದರ್ಯ ಯು.ಕೆ. ನಿರೂಪಿಸಿ, ವಂದಿಸಿದರು.