ಮುಂದಿನ ದಿನಗಳಲ್ಲಿ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಜೀರ್ಣೋದ್ದಾರದ ಕಾರ್ಯವನ್ನು ಭಕ್ತಾಭಿಮಾನಿಗಳ ಸಹಕಾರದೊಂದಿಗೆ ವಿನೂತನ ಶೈಲಿಯಲ್ಲಿ ಲೋಕಕ್ಕೆ ಮಾದರಿಯಾಗಿ ನಿರ್ವಹಿಸಿ ಸಾಧಿಸಲಿರುವುದಾಗಿ ಬೆಂಗಳೂರಿನ ಎಂಆರ್ ಜಿ ಗ್ರೂಪ್ ನ ಸಂಸ್ಥಾಪಕ, ಆಡಳಿತ ನಿರ್ದೇಶಕ ಡಾ| ಕೆ.ಪ್ರಕಾಶ್ ಶೆಟ್ಟಿ ಹೇಳಿದರು. ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಪ್ರಾಂಗಣದಲ್ಲಿ ಮಂಗಳೂರು ವಿವಿ ಪ್ರದಾನಿಸಿದ ಗೌರವ ಡಾಕ್ಟರೇಟ್ ಗಾಗಿ ದೇವಳದ ಜೀರ್ಣೋದ್ದಾರ ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರಿಂದ ಆಯೋಜಿಸಲ್ಪಟ್ಟ ‘ಪ್ರಕಾಶಾಭಿನಂದನೆ’ ಸ್ವೀಕರಿಸಿ ಮಾತನಾಡಿದರು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದೇಗುಲದ ಅರ್ಚಕ ಶ್ರೀ ಹರಿ ಭಟ್ ಶುಭಾಶಂಸನೆ ನೀಡಿದರು. ಡಾ. ರಾಘವೇಂದ್ರ ರಾವ್ ಅಭಿನಂದನಾ ಭಾಷಣ ಮಾಡಿದರು. ಆಶಾ ಪ್ರಕಾಶ್ ಶೆಟ್ಟಿ, ಜೀರ್ಣೋದ್ದಾರ ಸಮಿತಿ ಕಾರ್ಯದರ್ಶಿ ಪಿ. ರಾಘವೇಂದ್ರ ನಾವಡ, ಪಡುಬಿದ್ರಿ ಗ್ರಾ.ಪಂ. ಅಧಕ್ಷೆ ಶಶಿಕಲಾ ವೈ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಕಮಿಷನರ್ ಪ್ರಶಾಂತ್ ಕುಮಾರ್ ಶೆಟ್ಟಿ, ದೇವಸ್ಥಾನದ ಅರ್ಚಕರಾದ ಗುರುರಾಜ ಭಟ್ ವೈ. ಮತ್ತು ಹೆಜಮಾಡಿ ಪದ್ಮನಾಭ ಭಟ್, ಪದ್ಮನಾಭ ಕೊರ್ನಾಯ, ದೇಗುಲದ ಕಾರ್ಯ ನಿರ್ವಹಣಾಧಿಕಾರಿ ಅಶೋಕ್ ಕೋಟೆಕಾರ್, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ, ಕಾಪು ಹೊಸ ಮಾರಿಗುಡಿ ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಅಧ್ಯಕ್ಷ ರವಿ ಸುಂದರ ಶೆಟ್ಟಿ ಉಪಸ್ಥಿತರಿದ್ದರು.
ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಪೇಟೆಮನೆ ಭವಾನಿ ಶಂಕರ ಹೆಗ್ಡೆ ಸ್ವಾಗತಿಸಿದರು. ನವೀನ್ ಚಂದ್ರ ಜೆ. ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಕಸ್ತೂರಿ ರಾಮಚಂದ್ರ ಅಭಿನಂದನಾ ಪತ್ರ ವಾಚಿಸಿದರು. ಡಾ ರಾಘವೇಂದ್ರ ರಾವ್ ಕಾರ್ಯಕ್ರಮ ನಿರ್ವಹಿಸಿದರು. ಜೀರ್ಣೋದ್ದಾರ ಸಮಿತಿ ಉಪಾಧ್ಯಕ್ಷ ಪಿ. ರವೀಂದ್ರನಾಥ ಜಿ. ಹೆಗ್ಡೆ ವಂದಿಸಿದರು.