ಬಂಟ ಸಮಾಜದ ಋಣ ನನ್ನ ಮೇಲಿದೆ. ಈ ನಿಟ್ಟಿನಲ್ಲಿ ನಾನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪುವಂತಹ ಸೇವಾ ಕಾರ್ಯಗಳನ್ನು ಮುಂದುರಿಸಿದ್ದೇನೆ. ಪಡುಬಿದ್ರಿ ಬಂಟರ ಸಂಘವು ನನ್ನಲ್ಲಿ ಆದರಾಭಿಮಾನವನ್ನು ಇರಿಸಿರುವುದು ಸಂತಸವನ್ನು ಉಂಟು ಮಾಡಿದೆ ಎಂದು ಬೆಂಗಳೂರಿನ ಎಂಆರ್ ಜಿ ಸಮೂಹ ಸಂಸ್ಥೆಗಳ ಸಂಸ್ಥಾಪಕ, ಆಡಳಿತ ನಿರ್ದೇಶಕ ಡಾ.ಕೆ ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಜುಲೈ 7 ರಂದು ಮಂಗಳೂರು ವಿವಿ ಪ್ರದಾನಿಸಿದ ಗೌರವ ಡಾಕ್ಟರೇಟ್ ಗಾಗಿ ಡಾ| ಕೆ ಪ್ರಕಾಶ್ ಶೆಟ್ಟಿ ದಂಪತಿಯನ್ನು ಅಭಿನಂದಿಸಲು ಪಡುಬಿದ್ರಿಯಲ್ಲಿ ಆಯೋಜಿಸಲಾಗಿದ್ದ ಸಮ್ಮಾನ ಸಮಾರಂಭದಲ್ಲಿ ಸಮ್ಮಾನವನ್ನು ಸ್ವೀಕರಿಸಿ ಮಾತನಾಡಿದರು.
ಸಂಘದ ಸಭಾಂಗಣಕ್ಕೆ ಹಾಗೂ ಭೋಜನ ಗೃಹಕ್ಕೆ ಹವಾನಿಯಂತ್ರಿತ ವಾತಾಯನ ವ್ಯವಸ್ಥೆಯನ್ನು ಭರಿಸಿ ಸದಾ ಸಮಾಜದ ಅಭ್ಯುದಯದ ಕುರಿತಾಗಿ ಚಿಂತನಾ ಶೀಲರಾಗಿರುವ ಡಾ| ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಮಂಗಳೂರು ವಿ.ವಿ. ಗೌರವ ಡಾಕ್ಟರೇಟ್ ಪ್ರದಾನಿಸಿರುವುದು ಬಂಟ ಸಮಾಜ ಬಾಂಧವರೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ ಎಂದು ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು.
ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷ ವೈ. ಶಶಿಧರ ಶೆಟ್ಟಿ ಎರ್ಮಾಳು, ಟ್ರಸ್ಟಿಗಳಾದ ಸುರೇಶ್ ಶೆಟ್ಟಿ ಗುಂಡ್ಲಾಡಿ, ಸಂಘದ ಮಾಜಿ ಅಧ್ಯಕ್ಷ ನವೀನ್ ಚಂದ್ರ ಜೆ. ಶೆಟ್ಟಿ, ಉಪಾಧ್ಯಕ್ಷರಾದ ಶ್ರೀನಾಥ್ ಹೆಗ್ಡೆ, ಸಂತೋಷ್ ಶೆಟ್ಟಿ ಪಲ್ಲವಿ, ಗೋವಾ ಸದಾನಂದ ಶೆಟ್ಟಿ, ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಬಂಟರ ಸಂಘದ ಯುವ ವಿಭಾಗದ ಅಧ್ಯಕ್ಷ ನವೀನ್ ಎನ್. ಶೆಟ್ಟಿ, ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಭವಾನಿಶಂಕರ ಹೆಗ್ಡೆ, ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷ ರವೀಂದ್ರನಾಥ ಜಿ. ಹೆಗ್ಡೆ, ಜಯ ಶೆಟ್ಟಿ ಪದ್ರ, ಮಿಥುನ್ ಆರ್. ಹೆಗ್ಡೆ, ಮಾಧವ ಸಿ. ಶೆಟ್ಟಿ, ಧನ್ ಪಾಲ್ ಶೆಟ್ಟಿ ಅವರಾಲು, ಹರೀಶ್ ಶೆಟ್ಟಿ ಪಾದೆಬೆಟ್ಟು, ಸುಧಾಕರ ಶೆಟ್ಟಿ ಹೆಜಮಾಡಿ, ಶರತ್ ಶೆಟ್ಟಿ ಮತ್ತಿತರರಿದ್ದರು.