ವಿದ್ಯಾಗಿರಿ: ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಶೋಷಣೆಯನ್ನು ಆರಂಭಿಕ ಹಂತದಲ್ಲಿ ಮಟ್ಟ ಹಾಕಬೇಕು. ನಿರ್ಲಕ್ಷ್ಯ ವಹಿಸಿದರೆ ಬೃಹತ್ ಸಮಸ್ಯೆಯಾಗಿ ಕಾಡುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್ ವಕೀಲರಾದ ಪ್ರತಿಮಾ ಎಸ್. ಬಂಗೇರ ಹೇಳಿದರು.ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಮಹಿಳಾ ಸುರಕ್ಷಾ ಸಮಿತಿ ಹಮ್ಮಿಕೊಂಡ ‘ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ’ ಕುರಿತ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ’ ಮಾಹಿತಿಯನ್ನು ಪ್ರತಿಯೊಬ್ಬರು ಹೊಂದಿರಬೇಕು. ಕಾಲೇಜಿನ ಪ್ರಾಂಶುಪಾಲ ಪ್ರೊ. ಮೊಹಮ್ಮದ್ ಸದಾಕತ್ ಮಾತನಾಡಿ, ಕಾಲೇಜಿನ ಆವರಣದಲ್ಲಿ ಸುರಕ್ಷಿತ ವಾತಾವರಣ ಸೃಷ್ಟಿಸುವುದು ನಮ್ಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ ಎಂದರು. ಉಪಪ್ರಾಂಶುಪಾಲರಾದ ಝಾನ್ಸಿ ಪಿ.ಎನ್., ಬೆಳಕು ಆಪ್ತ ಸಮಾಲೋಚನದ ರೆನಿಟಾ ಡಿಸೋಜ, ಮಕ್ಕಳ ಸುರಕ್ಷಾ ಸಮಿತಿಯ ರಕ್ಷಣಾಧಿಕಾರಿ ಮಲ್ಲಿಕಾ ಮತ್ತು ಇತರ ಸದಸ್ಯರು ಇದ್ದರು.