ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಘಟಕದ ನೂತನ ಸಂಚಾಲಕರಾಗಿ ಕುಂಬ್ರ ದುರ್ಗಾಪ್ರಸಾದ್ ರೈ ಮತ್ತು ಸಹ ಸಂಚಾಲಕರಾಗಿ ಮಾಜಿ ತಾ. ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವರವರು ಜುಲೈ 16 ರಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಂಟರ ಯಾನೆ ನಾಡವರ ಮಾತೃ ಸಂಘದ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿದ ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಘಟಕದ ಕಾರ್ಯಕಾರಿ ಸಮಿತಿಯಲ್ಲಿ ನೂತನ ಆಯ್ಕೆ ನಡೆಯಿತು.
ನೂತನ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈಯವರ ಹೆಸರನ್ನು ಮಾತೃ ಸಂಘದ ಪುತ್ತೂರು ಘಟಕದ ನಿಕಟಪೂರ್ವ ಸಂಚಾಲಕ ದಯಾನಂದ ರೈ ಮನವಳಿಕೆ ಗುತ್ತು ಮತ್ತು ನೂತನ ಸಹ ಸಂಚಾಲಕ ಸಾಜ ರಾಧಾಕೃಷ್ಣ ಆಳ್ವರವರ ಹೆಸರನ್ನು ಮಾತೃ ಸಂಘದ ಪುತ್ತೂರು ಘಟಕದ ನಿಕಟಪೂರ್ವ ಸಹ ಸಂಚಾಲಕ ಜಯಪ್ರಕಾಶ್ ರೈ ನೂಜಿಬೈಲುರವರು ಸೂಚಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಘಟಕದ ನಿರ್ದೇಶಕರುಗಳಾದ ಜೈರಾಜ್ ಭಂಡಾರಿ ನೋಣಾಲು ಡಿಂಬ್ರಿ, ವಾಣಿ ಶೆಟ್ಟಿ ನೆಲ್ಯಾಡಿ, ಮಾತೃ ಸಂಘದ ನಿರ್ದೇಶಕ ಹಾಗೂ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಘಟಕದ ನೂತನ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ ಮತ್ತು ನೂತನ ಸಹ ಸಂಚಾಲಕ ಸಾಜ ರಾಧಾಕೃಷ್ಣ ಆಳ್ವರವರನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷರಾಗಿರುವ ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಬಂಟರ ಸಂಘದ ಮಾಜಿ ಅಧ್ಯಕ್ಷರುಗಳಾದ ಸವಣೂರು ಕೆ. ಸೀತಾರಾಮ ರೈ, ಅರಿಯಡ್ಕ ಲಕ್ಷ್ಮೀ ನಾರಾಯಣ ಶೆಟ್ಟಿ, ಬೂಡಿಯಾರ್ ರಾಧಾಕೃಷ್ಣ ರೈ, ನಿಕಟಪೂರ್ವ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಮಾಜಿ ಪ್ರಧಾನ ಕಾರ್ಯದರ್ಶಿ ಮೋಹನ್ ರೈ ನರಿಮೊಗರು, ಮಾತೃ ಸಂಘದ ನಿಕಟಪೂರ್ವ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ನಿಕಟಪೂರ್ವ ಸಹಸಂಚಾಲಕ ಜಯಪ್ರಕಾಶ್ ರೈ ನೂಜಿಬೈಲು, ಮಾತೃ ಸಂಘದ ನಿರ್ದೇಶಕರುಗಳಾದ ಜೈರಾಜ್ ಭಂಡಾರಿ ನೋಣಾಲು ಡಿಂಬ್ರಿ, ನಿತ್ಯಾನಂದ ಶೆಟ್ಟಿ ಮನವಳಿಕೆ, ವಾಣಿ ಶೆಟ್ಟಿ ನೆಲ್ಯಾಡಿ, ಬಂಟರ ಸಂಘದ ಕೋಶಾಧಿಕಾರಿ ಸಂತೋಷ್ ಶೆಟ್ಟಿ ಸಾಜರವರುಗಳು ಅಭಿನಂದಿಸಿ, ಗೌರವಿಸಿದರು.
ನೂತನ ಸಂಚಾಲಕರಾಗಿರುವ ಕುಂಬ್ರ ದುರ್ಗಾಪ್ರಸಾದ್ ರೈಯವರು ನ್ಯಾಯವಾದಿವಾಗಿದ್ದು, ತಾಲೂಕು ಬಂಟರ ಸಂಘದ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿರುವ ಇವರು ಜಿಲ್ಲಾ ಯುವ ಕಾಂಗ್ರೆಸ್ ವಕ್ತಾರರಾಗಿ ಜವಾಬ್ದಾರಿ ನಿರ್ವಹಿಸಿದ್ದು, ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲೂ ಸೇವೆ ಸಲ್ಲಿಸುತ್ತಿದ್ದಾರೆ. ನೂತನ ಸಹಸಂಚಾಲಕರಾಗಿರುವ ಸಾಜ ರಾಧಾಕೃಷ್ಣ ಆಳ್ವರವರು ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದು, ಈ ಹಿಂದೆ ಜಿ. ಪಂ ಹಾಗೂ ತಾ.ಪಂ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷರಾಗಿರುವ ಇವರು ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲೂ ಸೇವೆ ಸಲ್ಲಿಸಿರುತ್ತಾರೆ.