ಬಂಟರ ಸಂಘ ಜೆಪ್ಪು ಇವರ ಆಶ್ರಯದಲ್ಲಿ ಜುಲೈ 28 ರಂದು ಭಾನುವಾರ ಸಂಜೆ ಘಂಟೆ 3.30 ರಿಂದ ಎಮ್ಮಕೆರೆ ರಮಾಲಕ್ಷ್ಮೀ ನಾರಾಯಣ ಕನ್ವೆನ್ಷನ್ ಹಾಲ್ ನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಆಹ್ವಾನಿತ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಆಟಿಡೊಂಜಿ ದಿನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಹಾಗೂ ಗೌರವ ಅಭಿನಂದನಾ ಕಾರ್ಯಕ್ರಮ ವಸಂತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಆಷಾಢ ಮಹತ್ವದ ಕುರಿತಂತೆ ಸುರತ್ಕಲ್ ಗೋವಿಂದದಾಸ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಅಕ್ಷತಾ ನವೀನ್ ಶೆಟ್ಟಿ ಸಾಂದರ್ಭಿಕ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ರಾಮಕೃಷ್ಣ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜೈರಾಜ್ ಬಿ ರೈ, ಪುಣೆ ಅಹ್ಮದ್ ನಗರದ ಉದ್ಯಮಿ, 2024 ರ ಸಾಲಿನ ಆರ್ಯಭಟ ಪ್ರಶಸ್ತಿ ಪುರಸ್ಕೃತ ಕೆ ಕೆ ಶೆಟ್ಟಿ, ಹೈದರಬಾದ್ ಬಂಟರ ಸಂಘದ ಮಾಜಿ ಅಧ್ಯಕ್ಷ ರತ್ನಾಕರ್ ರೈ, ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಕಾರ್ಯಾಧ್ಯಕ್ಷ ದೇವಿಚರಣ್ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಿ ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಶ್ರೀ ಡೆವಲಪರ್ಸ್ ನ ಆಡಳಿತ ನಿರ್ದೇಶಕ ಗಿರೀಶ್ ಶೆಟ್ಟಿ ಕಟೀಲು ಇವರು ಆಗಮಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮನಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಮನಪಾ ಪ್ರತಿಪಕ್ಷ ನಾಯಕ ಟಿ ಪ್ರವೀಣ್ ಚಂದ್ರ ಆಳ್ವ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ಅಭಿಂದಿಸಿ ಗೌರವಿಸಲಾಗುವುದು. ಬಂಟ ಸಮಾಜ ಬಾಂಧವರೆಲ್ಲರೂ ಭಾಗವಹಿಸಿ ಈ ಅರ್ಥಪೂರ್ಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜೆಪ್ಪು ಬಂಟರ ಸಂಘದ ಅಧ್ಯಕ್ಷ ವಸಂತ್ ಶೆಟ್ಟಿ, ಸರ್ವ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.