ತಾಲೂಕು ಯುವ ಬಂಟರ ಸಂಘದ ವತಿಯಿಂದ ಬಂಟ ಸಮುದಾಯದ ಆರ್ಥಿಕವಾಗಿ ಹಿಂದುಳಿದ ಮತ್ತು ಅವಕಾಶಗಳಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳಡಿ ಪ್ರೋತ್ಸಾಹಧನ ವಿತರಣೆ ಸಮಾರಂಭ ಆಗಸ್ಟ್ 18 ರಂದು ಕೋಟೇಶ್ವರದ ಯುವ ಮೆರಿಡಿಯನ್ ಸಭಾಭವನದಲ್ಲಿ ನಡೆಯಲಿದೆ.

2024 ರ ಮಾರ್ಚ್ ತಿಂಗಳಲ್ಲಿ ನಡೆದ ಎಸೆಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 95 ಕ್ಕಿಂತ ಅಧಿಕ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಆಸರೆ ಯೋಜನೆಯಡಿ ತಂದೆ ಅಥವಾ ತಾಯಿಯನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಹಾಗೂ ನವಚೇತನ ಯೋಜನೆಯಡಿ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ನಡೆಯಲಿದೆ. ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಒಟ್ಟು 25 ಲಕ್ಷ ರೂ. ಮೊತ್ತದ ಪ್ರೋತ್ಸಾಹಧನ ವಿತರಣೆ ನಡೆಯಲಿದ್ದು ಮಣಿಪಾಲ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಚ್.ಎಸ್ ಬಲ್ಲಾಳ್ ಉದ್ಘಾಟಿಸಲಿದ್ದಾರೆ. 2024 -26 ನೇ ಅವಧಿಗೆ ಆಯ್ಕೆಗೊಂಡ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿವಿಧ ಸಂಸ್ಮರಣ ಪ್ರಶಸ್ತಿಗಳ ಪ್ರದಾನ ನಡೆಯಲಿದೆ ಎಂದು ಸಂಘದ ಗೌರವಾಧ್ಯಕ್ಷ ಬಿ.ಉದಯ್ ಕುಮಾರ್ ಶೆಟ್ಟಿ ಮತ್ತು ಅಧ್ಯಕ್ಷ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ತಿಳಿಸಿದ್ದಾರೆ.
















































































































