ಪುತ್ತೂರು ತಾಲೂಕು ಬಂಟರ ಸಂಘದ ವತಿಯಿಂದ ಅಗಸ್ಟ್ 10 ರಂದು ಪುತ್ತೂರಿನಲ್ಲಿ ವಿಜೃಂಭಣೆಯಿಂದ ನಡೆಯಲಿರುವ ಆಟಿಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಘಕ್ಕೆ ಬೆನ್ನೆಲುಬಾಗಿ ನಿಲ್ಲಬೇಕೆಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈಯವರಿಗೆ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಎ ಹೇಮನಾಥ್ ಶೆಟ್ಟಿ ಕಾವುರವರು ಗೌರವಪೂರ್ವಕವಾಗಿ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಕುಂಬ್ರ ದುರ್ಗಾಪ್ರಸಾದ್ ರೈ, ಸಾಜ ರಾಧಾಕೃಷ್ಣ ಆಳ್ವ, ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ, ನಿರ್ದೇಶಕರಾದ ರವಿಪ್ರಸಾದ್ ಶೆಟ್ಟಿ, ವಿಶೇಷ ಆಹ್ವಾನಿತರಾದ ಕೃಷ್ಣಪ್ರಸಾದ್ ಆಳ್ವ, ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಮಹಿಳಾ ಬಂಟರ ಸಂಘದ ಕೋಶಾಧಿಕಾರಿ ಅರುಣಾ ದಿನಕರ್ ರೈ, ಅನಿತಾ ಹೇಮನಾಥ್ ಶೆಟ್ಟಿ, ಯುವ ಬಂಟರ ಸಂಘದ ಜೊತೆ ಕಾರ್ಯದರ್ಶಿ ಶುಭ ರೈ ಉಪಸ್ಥಿತರಿದ್ದರು.