ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆಗಸ್ಟ್ 10ರಂದು ಪುತ್ತೂರು ಬಂಟರ ಭವನದಲ್ಲಿ ನಡೆಯಲಿರುವ ಆಟಿಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮದಲ್ಲಿ ಮಿತ್ರಂಪಾಡಿ ಚೆನ್ನಪ್ಪ ರೈ ಸ್ಮರಣಾತ್ಮಕ ಉದ್ಯಮಿ ಜಯರಾಮ್ ರೈ ಮಿತ್ರಂಪಾಡಿ ಅಬುಧಾಬಿ ಇವರಿಂದ ಪ್ರಾಯೋಜಿತ ಸಮಾಜ ಸೇವಾ ಮಿತ್ರ ಪ್ರಶಸ್ತಿ ಪಡೆಯಲಿರುವ ಕುದ್ಕಾಡಿ ಶೀನಪ್ಪ ರೈ ಕೊಡೆಂಕೀರಿರವರಿಗೆ ಅವರ ನಿವಾಸದಲ್ಲಿ ಆಗಸ್ಟ್ 4ರಂದು ಪುತ್ತೂರು ತಾಲೂಕು ಬಂಟರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರ ನೇತೃತ್ವದಲ್ಲಿ ಆಟಿಡೊಂಜಿ ಬಂಟೆರೆ ಸೇರಿಗೆ ಸಮಾರಂಭದ ಆಮಂತ್ರಣವನ್ನು ನೀಡಿ, ಗೌರವಿಸಲಾಯಿತು.

ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಸಹ ಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ನಿಕಟಪೂರ್ವ ಸಹ ಸಂಚಾಲಕ ಜಯಪ್ರಕಾಶ್ ರೈ ನೂಜಿಬೈಲು, ತಾಲೂಕು ಬಂಟರ ಸಂಘದ ಕೋಶಾಧಿಕಾರಿ ಸಂತೋಷ್ ಶೆಟ್ಟಿ, ಮಾಜಿ ಕಾರ್ಯದರ್ಶಿ ಮೋಹನ್ ರೈ ನರಿಮೊಗರು, ಜೊತೆ ಕಾರ್ಯದರ್ಶಿ ಸ್ವರ್ಣಲತಾ ಜೆ. ರೈ, ನಿರ್ದೇಶಕರಾದ ದಂಬೆಕ್ಕಾನ ಸದಾಶಿವ ರೈ, ಶಿವನಾಥ ರೈ ಮೇಗಿನಗುತ್ತು, ರವಿಪ್ರಸಾದ್ ಶೆಟ್ಟಿ ಬನ್ನೂರು, ನಿತಿನ್ ಪಕ್ಕಳ, ಯುವ ಬಂಟರ ಸಂಘದ ಅಧ್ಯಕ್ಷ ಹರ್ಷಕುಮಾರ್ ರೈ ಮಾಡಾವು, ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಜಯಕುಮಾರ್ ರೈ ಮಿತ್ರಂಪಾಡಿ, ತಾಲೂಕು ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಗೀತಾ ಮೋಹನ್ ರೈ, ನಿಕಟಪೂರ್ವಾಧ್ಯಕ್ಷೆ ಸಬಿತಾ ಭಂಡಾರಿ, ಅನಿತಾ ಹೇಮನಾಥ ಶೆಟ್ಟಿ ಕಾವು, ಜಯಂತಿ ರೈ ಮಾಡಾವು ಹಾಗೂ ಶೀನಪ್ಪ ರೈ ಕೊಡೆಂಕೀರಿರವರ ಮನೆಯವರು ಮತ್ತು ಬಂಧುಗಳು ಉಪಸ್ಥಿತರಿದ್ದರು.

		




































































































