ಪುಣೆ ತುಳುಕೂಟದ 25 ನೇ ವಾರ್ಷಿಕೋತ್ಸವ ಸಂಭ್ರಮದ ಉದ್ಘಾಟನಾ ಸಮಾರಂಭವು ಆಗಸ್ಟ್ 15 ರಂದು ಅಪರಾಹ್ನ 2 ಗಂಟೆಗೆ ಗಣೇಶ್ ನಗರದ ಎರಾಂಡವನದ ಪುಣೆ ಕನ್ನಡ ಸಂಘದ ಶ್ರೀಮತಿ ಶಕುಂತಲಾ ಜಗನ್ನಾಥ್ ಶೆಟ್ಟಿ ಆಡಿಟೋರಿಯಂನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ತುಳುಕೂಟ ಪುಣೆ ಇದರ ಅಧ್ಯಕ್ಷ ದಿನೇಶ್ ಶೆಟ್ಟಿ ಕಳತ್ತೂರು ಅವರ ಅಧ್ಯಕ್ಷತೆಯಲ್ಲಿ ಜರಗಲಿರುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷ, ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಕಾತ್ರಾಜ್ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷ ಸದಾನಂದ ಕೆ. ಶೆಟ್ಟಿ ಅವರು ಭಾಗವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಪುಣೆ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಹೆಗ್ಡೆ ಪುಣ್ಚೂರು, ಪುಣೆ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ, ಪಂಜುರ್ಲಿ ಗ್ರೂಪ್ ಆಫ್ ಹೊಟೇಲ್ಸ್ ನ ಸಿಎಂಡಿ ರಾಜೇಂದ್ರ ಶೆಟ್ಟಿ ಅವರು ಪಾಲ್ಗೊಳ್ಳಲಿದ್ದಾರೆ.
ಸಮಾರಂಭದಲ್ಲಿ ಸಾಮಾಜಿಕ ಸೇವೆಗೈದ ಗಣ್ಯರಾದ ಅಹ್ಮದ್ ನಗರದ ಉದ್ಯಮಿ ಶಬರಿ ಇಂಡಸ್ಟ್ರಿಯಲ್ ಹಾಸ್ಪಿಟಾಲಿಟಿ ಪ್ರೈವೇಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕ, 2024 ನೇ ಸಾಲಿನ ಆರ್ಯಭಟ ಪ್ರಶಸ್ತಿ ಪುರಸ್ಕೃತ ಕೆ.ಕೆ. ಶೆಟ್ಟಿ, ಪುಣೆಯ ಖ್ಯಾತ ಕೈಗಾರಿಕೋದ್ಯಮಿ, ಪುಣೆ ಕುಲಾಲ ಸಂಘದ ಮಾಜಿ ಅಧ್ಯಕ್ಷ ಸದಾಶಿವ ಬಂಜನ್, ಪುಣೆಯ ಖ್ಯಾತ ಹೋಟೆಲ್ ಉದ್ಯಮಿ ಕೆ.ಕೆ. ಪೂಜಾರಿ ಅವರನ್ನು ವರ್ಷದ ವಿಶೇಷ ಸಾಧಕರನ್ನಾಗಿ ಗುರುತಿಸಿ ಸನ್ಮಾನಿಸಲಾಗುವುದು. ಅಲ್ಲದೇ ಶೈಕ್ಷಣಿಕ ವರ್ಷದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾಗುವುದು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮವಾಗಿ ತುಳುಕೂಟದ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ತೂರು ಅವರ ಆಯೋಜನೆಯಲ್ಲಿ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಪುಣೆ ಇದರ ಕಲಾವಿದರು ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಮಾಯದ ದೈವ ಪಂಜುರ್ಲಿ ತುಳು ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
ಪುಣೆಯಲ್ಲಿ ನೆಲೆ ನಿಂತ ತುಳುವರು ಸ್ನೇಹ ಬಾಂಧವ್ಯದಿಂದ ಕರ್ಮಭೂಮಿಯಲ್ಲಿ ನಮ್ಮ ತುಳುನಾಡ ಕಲೆ ಸಂಸ್ಕೃತಿ, ಆಚಾರ ವಿಚಾರಗಳನ್ನು ಬೆಳೆಸುವ ಉದ್ದೇಶದೊಂದಿಗೆ ತುಳುಕೂಟವನ್ನು ಸ್ಥಾಪಿಸಿದರು. ತುಳುವರ ಸೇವೆಯಲ್ಲಿ ನಿರಂತರ 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗೆ ಪ್ರಸ್ತುತ 25 ರ ಸಂಭ್ರಮ. ಪ್ರತೀ ವರ್ಷ ಆಗಸ್ಟ್ 15 ರಂದು ವಾರ್ಷಿಕೋತ್ಸವ ನಡೆಸುತ್ತಿದೆ. ಪ್ರಸ್ತುತ ವರ್ಷ 25 ನೇ ವಾರ್ಷಿಕೋತ್ಸವ ನಡೆಯಲಿದ್ದು, ರಜತ ಮಹೋತ್ಸವ ಮಹಾ ಸಂಭ್ರಮ ಕಾರ್ಯಕ್ರಮವು ನವೆಂಬರ್ 10 ರಂದು ಅದ್ದೂರಿಯಾಗಿ ನಡೆಯಲಿದೆ. ಸಂಸ್ಥೆಯ ಮುಖಾಂತರ ವರ್ಷ ಪೂರ್ತಿ ಸಾಮಾಜಿಕ, ಧಾರ್ಮಿಕ, ಕ್ರೀಡಾ ಮತ್ತು ಕಲಾ ಕಾರ್ಯಕ್ರಮಗಳು ನಡೆಯುತ್ತಿದೆ. ತುಳುನಾಡಿನ ಕಲೆ, ಸಂಸ್ಕೃತಿ, ಆಚಾರ ವಿಚಾರಗಳನ್ನು ತಿಳಿಸುವ ವೈವಿದ್ಯಮಯ ಮನೋರಂಜನಾ ಕಾರ್ಯಕ್ರಮಗಳು, ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕಾರ, ಯುವ ಪೀಳಿಗೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕ್ರೀಡಾಕೂಟ, ದಸರಾ ಪೂಜೆ, ಅರಸಿನ ಕುಂಕುಮ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣ ಶಿಬಿರ, ಅನಾಥಾಶ್ರಮಗಳಿಗೆ ನೆರವು, ಅಂಗವಿಕರಿಗೆ ನೆರವು, ಯಕ್ಷಗಾನ, ನಾಟಕ, ನೃತ್ಯ ಪ್ರದರ್ಶನ ಮೊದಲಾದ ಜನಪರ ಕಾರ್ಯಗಳು ನಡೆಯುತ್ತಿದೆ. ಸಂಘದ ಪ್ರತಿಯೊಂದು ಕಾರ್ಯ ಯೋಜನೆಗಳಿಗೂ ಪುಣೆಯ ಮಹಾದಾನಿಗಳು ಸಹಕಾರ ನೀಡುವುದರ ಮೂಲಕ ಪ್ರೋತ್ಸಾಹಿಸುತ್ತಿದ್ದಾರೆ.
ಸಂಸ್ಥೆಯ ಗೌರವಾಧ್ಯಕ್ಷರಾಗಿ ಮೋಹನ್ ಶೆಟ್ಟಿ ಎಣ್ಣೆಹೊಳೆ, ಅಧ್ಯಕ್ಷರಾಗಿ ದಿನೇಶ್ ಶೆಟ್ಟಿ ಕಳತ್ತೂರು ಅವರ ಸಂಘಟನಾ ನಾಯಕತ್ವದಲ್ಲಿ ಬೆಳ್ಳಿ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿ ಪ್ರವೀಣ್ ಶೆಟ್ಟಿ ಪುತ್ತೂರು ಕಾರ್ಯ ನಿರ್ವಹಿಸುತ್ತಿದ್ದಾರೆ. ಉಪಾಧ್ಯಕ್ಷರಾಗಿ ಮಾಧವ ಶೆಟ್ಟಿ, ಉದಯ್ ಶೆಟ್ಟಿ ಕಳತ್ತೂರು, ಶೇಖರ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಾಜಾರಾಮ ಶೆಟ್ಟಿ, ಕೋಶಾಧಿಕಾರಿಯಾಗಿ ಮನೋಹರ ಶೆಟ್ಟಿ, ಕಾನೂನು ಸಲಹೆಗಾರರಾಗಿ ಗುರುನಾಥ್ ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಎಣ್ಣೆಹೊಳೆ, ಕ್ರೀಡಾ ಕಾರ್ಯಾಧ್ಯಕ್ಷರಾಗಿ ನಾರಾಯಣ ಹೆಗ್ಡೆ, ಕ್ಯಾಟರಿಂಗ್ ವಿಭಾಗದ ಕಾರ್ಯಾಧ್ಯಕ್ಷರಾಗಿ ಯಶವಂತ ಶೆಟ್ಟಿ ಉಳಾಯಿಬೆಟ್ಟು, ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷರಾಗಿ ಮಹಾಬಲೇಶ್ವರ ದೇವಾಡಿಗ, ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷರಾಗಿ ದಿವಾಕರ್ ಶೆಟ್ಟಿ ಮಾಣಿಬೆಟ್ಟು, ಜನ ಸಂಪರ್ಕಾಧಿಕಾರಿಗಳಾಗಿ ಸದಾನಂದ ಪೂಜಾರಿ, ಆನಂದ್ ಶೆಟ್ಟಿ ಮಡಂತ್ಯಾರು, ಸದಸ್ಯ ನೋಂದಣಿ ಸಮಿತಿಯ ಕಾರ್ಯಾಧ್ಯಕ್ಷರಾಗಿ ಬಾಲಕೃಷ್ಣ ಗೌಡ, ಸಾಮಾಜಿಕ ಜಾಲತಾಣ ಕಾರ್ಯಾಧ್ಯಕ್ಷರಾಗಿ ಸುಕೇಶ್ ಶೆಟ್ಟಿ ಅಂಗಡಿಗುತ್ತು, ಜತೆ ಕಾರ್ಯದರ್ಶಿಗಳಾಗಿ ಪ್ರಕಾಶ್ ಪೂಜಾರಿ, ಶರತ್ ಭಟ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಪ್ರಿಯಾ ಎಚ್ ದೇವಾಡಿಗ, ಉಪಾಧ್ಯಕ್ಷರಾಗಿ ಗೀತಾ ಪೂಜಾರಿ, ಶಶಿಕಲಾ ಶೆಟ್ಟಿ, ಕಾರ್ಯದರ್ಶಿಯಾಗಿ ನಯನಾ ಸಿ. ಶೆಟ್ಟಿ, ಕೋಶಾಧಿಕಾರಿಯಾಗಿ ಶಶಿಕಾಂತಿ ಎನ್. ದೇವಾಡಿಗ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಸರಿತಾ ಟಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷರಾಗಿ ಅಭಿಜಿತ್ ಶೆಟ್ಟಿ ಮತ್ತು ಶ್ರುತಿ ಜೆ. ಶೆಟ್ಟಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಸಮಿತಿಯ ಪ್ರಮುಖರು ಸಲಹೆಗಾರ ಸಮಿತಿ, ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸರ್ವ ಸದಸ್ಯರ ಸಹಕಾರದೊಂದಿಗೆ ತುಳುಕೂಟವು 25 ನೇ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದು, ಪುಣೆಯಲ್ಲಿರುವ ಸರ್ವ ತುಳುನಾಡ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಕರಿಸುವಂತೆ ತುಳುಕೂಟದ ಸರ್ವ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.