ಮುಂಬಯಿಯ ಪ್ರತಿಷ್ಠಿತ ಪಯ್ಯಡೆ ಗ್ರೂಪ್ ಆಫ್ ಹೋಟೆಲ್ಸ್ ನ ಆಡಳಿತ ಪಾಲುದಾರ, ಬಂಟ್ವಾಳದ ಪ್ರಗತಿಪರ ಕೃಷಿಕ, ಬಂಟರ ಸಂಘ ಮುಂಬಯಿಯ ಮಾಜಿ ಅಧ್ಯಕ್ಷ ಪದ್ಮನಾಭ ಪಯ್ಯಡೆ ಹಾಗೂ ಉದ್ಯಮಿ ಸಮಾಜ ಸೇವಕ ಮುಂಡಪ್ಪ ಪಯ್ಯಡೆ ಅವರ ಸೋದರ ರಘುನಾಥ ಪಯ್ಯಡೆ ಕೂರಿಯಾಳಗುತ್ತು ಅವರು ಆಗಸ್ಟ್ 20ರಂದು ಅನಾರೋಗ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ ಅವರು ದೊಡ್ಡ ಮಟ್ಟಿದ ಕೊಡುಗೈ ದಾನಿಯಾಗಿ ಗುರುತಿಸಿಕೊಂಡಿದ್ದರು. ಅಮ್ಟಾಡಿ ಮಂಡಲ ಪಂಚಾಯತ್ ಪ್ರಧಾನರಾಗಿ, ಬಂಟ್ವಾಳ ತಾ.ಪಂ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಬಂಟ್ವಾಳ ತಾಲೂಕು ಬಂಟರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಬಂಟವಾಳದ ಬಂಟರ ಭವನ ನಿರ್ಮಾಣಕ್ಕೆ ದೊಡ್ಡ ಕೊಡುಗೆ ನೀಡಿದ್ದರು. ಪ್ರಸ್ತುತ ಬಂಟರ ಸಂಘ ಬೆಳ್ಳೂರು ವಲಯದ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
ಅವರ ನಿಧನಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಇಸ್ಸಾರ್ ಫೈನಾನ್ಸಿಯಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕ ಡಾ| ಆರ್ ಕೆ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ದ.ಕ ಸಂಸದ ಕ್ಯಾ.ಬ್ರಿಜೇಶ್ ಚೌಟ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಬಿ.ರಮಾನಾಥ ರೈ, ಬಿ.ನಾಗರಾಜ ಶೆಟ್ಟಿ, ಸ್ಕ್ಯಾಡ್ಸ್ ನ ಅಧ್ಯಕ್ಷ ರವೀಂದ್ರ ಕಂಬಳಿ,ಜಿ.ಪಂ. ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ ತುಂಬೆ ಸೇರಿದಂತೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿದ್ದಾರೆ.