ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನ ಎರಡನೇ ತರಗತಿಯ ವಿದ್ಯಾರ್ಥಿ ವಿಹಾನ್ ಹತ್ವಾರ್ ಚೆಸ್ ಪಂದ್ಯದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿ ಚೆಸ್ ಅಕಾಡೆಮಿ ಹಾಗೂ ಬಿಜಿಎಸ್-ಎನ್ಪಿಎಸ್ ಸ್ಕೂಲ್ ಬೆಂಗಳೂರು ಇದರ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ ನಡೆದ ಏಳು ವರ್ಷದೊಳಗಿನ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಜಿ ಎಮ್ ಸಂಸ್ಥೆಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ, ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಸಂಸ್ಥೆಯ ಪರವಾಗಿ ಅಭಿನಂದಿಸಿ ಶುಭಹಾರೈಸಿದರು. ಇವರು ಉಡುಪಿಯ ಶಿಶಿರ್ ಹಾಗೂ ಶ್ರೀದೇವಿಯವರ ಪುತ್ರರಾಗಿದ್ದಾರೆ.