ಬಂಟರ ಯಾನೆ ನಾಡವರ ಮಾತೃ ಸಂಘ, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳು ಹಾಗೂ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ತೆನೆಹಬ್ಬ, ಅಷ್ಟೋತ್ತರ ನಾರೀಕೇಳ ಮಹಾಗಣಾಯಾಗವು ಸೆಪ್ಟೆಂಬರ್ ತಿಂಗಳ ತಾರೀಕು 7ರಿಂದ ಸೆಪ್ಟೆಂಬರ್ ತಿಂಗಳ ತಾರೀಕು 9ರವರೆಗೆ ಮಂಗಳೂರಿನ ‘ಓಂಕಾರ ನಗರ’, ಬಂಟ್ಸ್ ಹಾಸ್ಟೆಲ್ ಇಲ್ಲಿ ಜರಗಲಿದೆ ಎಂದು ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಡಾ ಆಶಾಜ್ಯೋತಿ ರೈ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ದಿನಾಂಕ 06.09.2024ರ ಶುಕ್ರವಾರ ಶರವು ದೇವಸ್ಥಾನದ ಬಳಿಯಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿ ಶ್ರೀ ರಾಮದಾಸ್ ಆಚಾರ್ ರವರ ಶಿಷ್ಯರಿಂದ ರಚಿಸಲ್ಪಟ್ಟ ಶ್ರೀ ಸಿದ್ಧಿವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೇಲ್ ನ ‘ಓಂಕಾರ ನಗರ’ಕ್ಕೆ ಬರ ಮಾಡಿಕೊಳ್ಳುವುದು. ದಿನಾಂಕ 07.09.2024ರ ಬೆಳಿಗ್ಗೆ ಶನಿವಾರ 8.00 ಗಂಟೆಗೆ ಧ್ವಜರೋಹಣಾ, ಗಣೇಶೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ತೆನೆ ವಿತರಣಾ ಕಾರ್ಯಕ್ರಮ ಜರಗುವುದು. ಸಂಜೆ ಗಂಟೆ 5.00ರಿಂದ 7.00 ರವರೆಗೆ ಭಾರ್ಮಿಕ ಸಭಾ ಕಾರ್ಯಕ್ರಮ ಜರಗಲಿರುವುದು. ಈ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿದ ಸಾಧಕರಿಗೆ ಸನ್ಮಾನಿಸಲಾಗುವುದು ಎಂದರು.
ರಾತ್ರಿ ಗಂಟೆ 8.00ರಿಂದ ಆಳ್ವಾಸ್ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿರುವುದು. ದಿನಾಂಕ 08.09.2024ರ ಸಂಜೆ ಗಂಟೆ 5.00ರಿಂದ 7.00ರವರೆಗೆ ಧಾರ್ಮಿಕ ಸಭೆ ನಡೆಯುವುದು. ಈ ಸಂದರ್ಭದಲ್ಲೂ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ ಸಾಧಕರಿಗೆ ಸನ್ಮಾನಿಸಲಾಗುವುದು. ರಾತ್ರಿ ಗಂಟೆ 8.00 ರಿಂದ ಎಸ್.ಡಿ.ಎಂ ಕಲಾವೈಭವ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿರುವುದು ಎಂದು ಸಂಚಾಲಕ ದಿವಾಕರ ಸಾಮಾನಿ ಚೇಳಾರ್ ಗುತ್ತು ತಿಳಿಸಿದರು.
ದಿನಾಂಕ 09.09.2024ರ ಸೋಮವಾರದಂದು ಬೆಳಿಗ್ಗೆ ಗಂಟೆ 8.00ರಿಂದ ಲೋಕ ಕಲ್ಯಾಣಾರ್ಥವಾಗಿ ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಾಯಾಗ ಆರಂಭಗೊಂಡು ಬೆಳಿಗ್ಗೆ ಗಂಟೆ 11.30ಕ್ಕೆ ಪೂರ್ಣಾಹುತಿಗೊಳ್ಳಲಿದೆ. ಮಧ್ಯಾಹ್ನ 3.30ಕ್ಕೆ ಸಮಾಜದ ವಿವಿಧ ಗಣ್ಯರಿಂದ ಶೋಭಾಯಾತ್ರೆಗೆ ಚಾಲನೆ ದೊರೆಯಲಿದ್ದು, ಶೋಭಾಯಾತ್ರೆಯು ‘ಓಂಕಾರ ನಗರ’ದಿಂದ ಶ್ರದ್ಧಾ ಭಕ್ತಿಯಿಂದ ಹೊರಟು ಜಿಲ್ಲೆಯ ವಿವಿಧ ಭಜನಾ ತಂಡಗಳಿಂದ ಶೋಭಾಯಾತ್ರೆಯು ಬಂಟ್ಸ್ ಹಾಸ್ಟೇಲ್, ಪಿ.ಪಿಎಸ್ ವೃತ್ತ, ನ್ಯೂಚಿತ್ರಾ ಟಾಕೀಸ್, ರಥಬೀದಿ, ವೆಂಕಟರಮಣ ದೇವಸ್ಥಾನ ರಸ್ತೆಯಲ್ಲಿ ಸಾಗಿ ಶ್ರೀ ಮಹಾಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಗುವುದು. ಈ ಮೂರು ದಿನಗಳ ಕಾಲ ವೈದಿಕ ಕಾರ್ಯಕ್ರಮಗಳೊಂದಿಗೆ ವಿವಿಧ ಪೂಜೆಗಳು ಜರಗಲಿರುವುದು. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಬಂಟ ಸಮಾಜ ಬಾಂಧವರು ಮತ್ತು ಸಾರ್ವಜನಿಕರು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಗಣೇಶೋತ್ಸವದ ವೇದಿಕೆಯಲ್ಲಿ ವಿವಿಧ ಭಜನಾ ತಂಡಗಳಿಂದ ಭಜನಾ ಸೇವೆ ನಡೆಯಲಿರುವುದು.
ಪತ್ರಿಕಾಗೋಷ್ಠಿಯಲ್ಲಿ ಡಾ. ಆಶಾಜ್ಯೋತಿ ರೈ, ಟ್ರಸ್ಟಿ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ, ದಿವಾಕರ ಸಾಮಾನಿ ಚೇಳಾರ್ ಗುತ್ತು ಸಂಚಾಲಕರು, ಕೃಷ್ಣಪ್ರಸಾದ್ ರೈ, ಟ್ರಸ್ಟಿ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ, ವಸಂತ ಶೆಟ್ಟಿ, ಸಂಚಾಲಕರು ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ತಾಲೂಕು ಸಮಿತಿ, ಮನೀಶ್ ರೈ, ಸಂಚಾಲಕರು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಅಶ್ವತ್ತಾಮ ಹೆಗ್ಡೆ, ಸಂಚಾಲಕರು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಸಂತೋಷ್ ಕುಮಾರ್ ಶೆಟ್ಟಿ ಶೆಡ್ಡೆ, ಸಂಚಾಲಕರು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಉಪಸ್ಥಿತರಿದ್ದರು.