ಅಶೋಕನಗರ ಉರ್ವ ಬಂಟರ ಸಂಘದ ವಾರ್ಷಿಕ ಮಹಾಸಭೆಯು ಉರ್ವಸ್ಟೋರ್ ಬಳಿಯ ಡಾ. ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಜರಗಿದ್ದು, ಮುಂದಿನ ಎರಡು ವರ್ಷಗಳ ಅವಧಿಗೆ ರವಿಚಂದ್ರ ಶೆಟ್ಟಿ ಅವರು ಅಧ್ಯಕ್ಷರಾಗಿ ಪುನರಾಯ್ಕೆ ಆಗಿದ್ದಾರೆ. ಇವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಹಾಫ್ ಕಾಮ್ಸ್ ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ, ವಿಶ್ವ ಹಿಂದೂ ಪರಿಷತ್ ಉರ್ವ ಇದರ ಅಧ್ಯಕ್ಷರಾಗಿ ಪ್ರತಿಷ್ಠಿತ ಯಕ್ಷದ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ನ ಜೊತೆ ಕಾರ್ಯದರ್ಶಿಯಾಗಿ ಯಕ್ಷಧ್ರುವ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿಸುತ್ತಿದ್ದಾರೆ. ಮಂಗಳೂರಿನ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.