ಹೆಮ್ಮಾಡಿ ಕೊಲ್ಲೂರು ಮುಖ್ಯ ರಸ್ತೆಯ ಕಟ್ ಬೆಲ್ತೂರಿನಲ್ಲಿ ಶ್ರೀ ದುರ್ಗಾ ಎನರ್ಜಿ ಸ್ಟೇಷನ್ ಪೆಟ್ರೋಲ್ ಬಂಕ್ ಶುಕ್ರವಾರ ಉದ್ಘಾಟನೆಗೊಂಡಿತು. ಮಾಜಿ ಶಾಸಕ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಬಂಕ್ ನ ಕಚೇರಿಯನ್ನು ಉದ್ಘಾಟಿಸಿದರು. ಬೆಳಗ್ಗೆ ಲಕ್ಷ್ಮೀ ಪೂಜೆ, ಭಜನಾ ಕಾರ್ಯಕ್ರಮ, ಮಧ್ಯಾಹ್ನ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಭಕ್ತ ಚಂದ್ರಹಾಸ ಯಕ್ಷಗಾನ ಪ್ರದರ್ಶನಗೊಂಡಿತು.
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಬಿ.ಎಂ. ಸುಕುಮಾರ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಎಸ್. ರಾಜು ಪೂಜಾರಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಅರವಿಂದ ಪೂಜಾರಿ ನಾಡ, ಬೆಳ್ವೆ ಸತೀಶ್ ಕಿಣಿ, ಸಂಪಿಗೇಡಿ ಸಂಜೀವ ಶೆಟ್ಟಿ, ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಕೆರಾಡಿ ಪ್ರಸನ್ನ ಕುಮಾರ್ ಶೆಟ್ಟಿ, ಕಂಬದಕೋಣೆ ಪ್ರಕಾಶ್ ಚಂದ್ರ ಶೆಟ್ಟಿ ಮತ್ತಿತರ ಗಣ್ಯರು ಆಗಮಿಸಿ ಶುಭ ಹಾರೈಸಿದರು. ಶ್ರೀ ದುರ್ಗಾ ಎನರ್ಜಿ ಸ್ಟೇಶನ್ ನ ಮಾಲಕ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ ಸ್ವಾಗತಿಸಿದರು.