ತುಳುಕೂಟ ಪುಣೆಯ ರಜತ ಮಹೋತ್ಸವ ಪ್ರಯುಕ್ತ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ಹಾಗೂ ಪ್ರತಿಭಾ ಸ್ಪರ್ಧಾ ಕಾರ್ಯಕ್ರಮಗಳು ವಿವಿಧ ವಯೋಮಿತಿಗೆ ಅನುಗುಣವಾಗಿ ಸೆಪ್ಟೆಂಬರ್ 15 ರಂದು ರವಿವಾರ ಪುಣೆಯ ಶ್ಯಾಮ್ ರಾವ್ ಕಲ್ಮಾಡಿ ಕನ್ನಡ ಹೈಸ್ಕೂಲ್ ಕೇತ್ಕರ್ ರೋಡ್ ಇಲ್ಲಿ ಬೆಳಿಗ್ಗೆ ಗಂಟೆ 9 ರಿಂದ ಸಂಜೆ ಗಂಟೆ 5 ರವರೆಗೆ ನಡೆಯಲಿದೆ. ಬೆಳಿಗ್ಗೆ ಗಂಟೆ 9 ರಿಂದ ಸ್ಪರ್ಧೆಗಳು ಆರಂಭವಾಗಲಿದ್ದು, ಮೊದಲಾಗಿ 5 ರಿಂದ 15 ವರ್ಷದ ಮಕ್ಕಳಿಗಾಗಿ ತುಳು ಮತ್ತು ಕನ್ನಡ ಭಕ್ತಿಗೀತೆ, 5 ರಿಂದ 15 ವರ್ಷದೊಳಗಿನ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ, 20 ವರ್ಷದ ಮೇಲಿನ ಮಹಿಳೆಯರು ಮತ್ತು ಪುರುಷರಿಗಾಗಿ ರಂಗೋಲಿ ಸ್ಪರ್ಧೆ, 1 ರಿಂದ 5 ವರ್ಷದ ವರೆಗಿನ ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ಧೆ, 6 ರಿಂದ 10 ವರ್ಷದೊಳಗಿನ ಮಕ್ಕಳಿಗಾಗಿ ಬಾಲಕೃಷ್ಣ ಸ್ಪರ್ಧೆ ನಡೆಯಲಿದೆ. ಮಹಿಳೆಯರಿಗಾಗಿ ತುಳುನಾಡಿನ ಸಂಸ್ಕೃತಿಯ ಸೀರೆ ಮತ್ತು ಒಡವೆಗಳನ್ನು ಧರಿಸಿ ನಡೆಸುವ ಫ್ಯಾಷನ್ ಶೋ ಸ್ಪರ್ಧೆ ಮತ್ತು ಕವಿ ಗೋಷ್ಠಿ, 20 ವರ್ಷ ಮೇಲ್ಪಟ್ಟವರಿಗೆ ಹಲವಾರು ಸ್ಪರ್ಧೆಗಳು ನಡೆಯಲಿದೆ.
ಪ್ರತಿಯೊಂದು ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ನೀಡಲಾಗುವುದು. ಕಾರ್ಯಕ್ರಮದಲ್ಲಿ ಅನುಭವಿ ತೀರ್ಪುಗಾರರಿದ್ದು, ಅವರ ನಿರ್ಣಯವೇ ಅಂತಿಮ ನಿರ್ಧಾರವಾಗಿರುತ್ತವೆ ಹಾಗೂ ಸ್ಪರ್ಧೆಗಳು ಆಯೋಜಕರ ನಿಯಮಾನುಸಾರ ನಡೆಯಲಿದೆ. ಈ ಪ್ರತಿಭಾ ಕಾರ್ಯಕ್ರಮದ ನಂತರ ಸಭಾ ಕಾರ್ಯಕ್ರಮವು ತುಳುಕೂಟದ ಅಧ್ಯಕ್ಷರಾದ ದಿನೇಶ್ ಶೆಟ್ಟಿ ಕಳತ್ತೂರು, ರಜತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ಪುತ್ತೂರುರವರ ಅಧ್ಯಕ್ಷತೆಯಲ್ಲಿ ಜರಗಲಿದ್ದು, ಮುಖ್ಯ ಅತಿಥಿಗಳಾಗಿ ಪುಣೆ ಮಹಾನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್ ಸುಜಾತಾ ಸದಾನಂದ ಶೆಟ್ಟಿ, ಪುಣೆ ಕನ್ನಡ ಸಂಘದ ಉಪಾಧ್ಯಕ್ಷೆ ಇಂದಿರಾ ಸಾಲ್ಯಾನ್, ತುಳುಕೂಟದ ಮಾಜಿ ಮಹಿಳಾ ಕಾರ್ಯಾಧ್ಯಕ್ಷೆ ಪುಷ್ಪ ಎಲ್ ಪೂಜಾರಿ, ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿಯ ಮಹಿಳಾ ಕಾರ್ಯಾಧ್ಯಕ್ಷೆ ಯಶೋದಾ ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿಯ ಮಹಿಳಾ ಕಾರ್ಯಾಧ್ಯಕ್ಷೆ ಪ್ರೇಮ ಅರ್ ಶೆಟ್ಟಿ ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ತುಳು ಬಾಂಧವರು, ಮಕ್ಕಳು ಆಗಮಿಸಿ ಪ್ರತಿಭಾ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರೋಹಿತ್ ಶೆಟ್ಟಿ ನಗ್ರಿಗುತ್ತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ಹರೀಶ್ ಮೂಡುಬಿದಿರೆ