ಸಸಿಹಿತ್ಲು ಸಮುದ್ರ ತಟದಲ್ಲಿ ಬೀಚ್ ಕ್ಲೀನಿಂಗ್ ಅಭಿಯಾನ ಹಾಗೂ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೆಪ್ಟೆಂಬರ್ 15, ಭಾನುವಾರದಂದು ಆಚರಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎನ್.ಸಿ.ಸಿ., ಎನ್.ಎಸ್.ಎಸ್. ನ 120 ವಿದ್ಯಾರ್ಥಿಗಳು ಪಾಲ್ಗೊಂಡು 30-40 ಚೀಲದಷ್ಟು ಕಸವನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ, ಮಾನವ ಸರಪಳಿ ರಚಿಸಿ ಪ್ರಜಾಪ್ರಭುತ್ವದ ಪರವಾದ ಘೋಷಣೆಗಳನ್ನು ಒಟ್ಟಿಗೆ ಕೂಗುವ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಯಿತು.
ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ಭಾರತ, ಮತ್ತು ಬಹುತ್ವದ ನೆಲೆಯಲ್ಲಿ ರೂಪುಗೊಂಡ ಭಾರತಕ್ಕೆ ಪ್ರಜಾಪ್ರಭುತ್ವ ಒಂದು ವರ. ನಾವು ಯಾವುದೇ ಜಾತಿ, ಮತ ಧರ್ಮ, ಭಾಷೆಗೆ ಸೇರಿದವರಾದರೂ ನಾವೆಲ್ಲ ಭಾರತೀಯರು ಎಂಬ ಹೆಮ್ಮೆ ಮತ್ತು ಐಕ್ಯತಾ ಭಾವ ನಮ್ಮಲ್ಲಿ ಸದಾ ಇರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ನುಡಿದರು.ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಮಾಣಿಕ್ಯ, ಐ.ಸಿ.ಸಿ. ಸಫಿರ್ಂಗ್ ಸ್ವಾಮಿ ಪ್ರತಿಷ್ಠಾನದ ನಿರ್ದೇಶಕರು ಹಾಗೂ ಸಫಿರ್ಂಗ್ ಸ್ವಾಮಿ ಪ್ರತಿಷ್ಠಾನದ ನಿರ್ದೇಶಕರು ಗೌರವ್ ಹೆಗ್ಡೆ ಮತ್ತು ಅದರ ಇತರ ಸದಸ್ಯರು, ಯಂಗ್ ಇಂಡಿಯನ್ಸ್ ನ ಮಧುಕರ್ ಮತ್ತು ಶರಣ್ ಶೆಟ್ಟಿ ಹಾಗೂ ಆಳ್ವಾಸ್ ನ ಸಿಬ್ಬಂದ್ಧಿ ಕೂಡ ಉಪಸ್ಥಿತರಿದ್ದರು.